
ಹಾಸನ : ಕ್ಯಾಂಟರ್ ವಾಹನ ಹಾಗೂ ಇನ್ನೋವಾ ಕಾರು ನಡುವೆ ಮುಖಾ ಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು ಆರು ಮಂದಿಗೆ ಗಾಯಗಳಾಗಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ನಂದಕುಮಾರ್ (37) ಮೃತ ವ್ಯಕ್ತಿ. ತಾಲ್ಲೂಕಿನ, ನುಗ್ಗೆಹಳ್ಳಿ ಕ್ರಾಸ್ ಬಳಿಯ,ಎನ್.ಎಚ್.75 ಪ್ಲೆಒವರ್ ಬಳಿ ಇಂದು ಮುಂಜಾನೆ ಘಟನೆ ನಡೆದಿದೆ. ಬೆಂಗಳೂರು ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರು ಹಾಸನದ ಕಡೆಗೆ ಬರುತ್ತಿದ್ದ ಕ್ಯಾಂಟರ್ ನಡುವೆ ಅಪ ಘಾತವಾಗಿದೆ.

ಇನ್ನೋವಾದಲ್ಲಿದ್ದ ಮೂವರಿಗೆ ಗಂಭೀರ ಗಾಯ ಗಳಾಗಿದ್ದು ಚನ್ನರಾಯಪಟ್ಟಣ ತಾಲ್ಲೂಕು ಆಸ್ಪತ್ರೆಯಲ್ಲಿ ಇಬ್ಬರಿಗೆ, ಹಾಸನ ಜಿಲ್ಲಾಸ್ಪತ್ರೆಯಲ್ಲಿ ಮೂವರು ಗಾಯಾಳುಗಳಿಗೆ ಚಿಕಿತ್ಸೆ ನೀಡಲಾ ಗುತ್ತಿದೆ. ಇನ್ನೋವಾದಲ್ಲಿದ್ದ ಏಳು ಮಂದಿ ಬೆಂಗಳೂರು ಮೂಲದವರು ಎಂದು ತಿಳಿದು ಬಂದಿದೆ. ಅಪಘಾತದ ನಂತರ ಕ್ಯಾಂಟರ್ ಚಾಲಕ ಪರಾರಿಯಾಗಿದ್ದುಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
