ಗ್ರಾಮ ಪಂಚಾಯಿತಿ ಚುನಾವಣೆ ಸಿದ್ದತೆಗಳ ಕುರಿತಂತೆ ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಇಂದು ಉಪವಿಭಾಗಾಧಿಕಾರಿಗಳು ಹಾಗೂ ತಹಸೀಲ್ದಾರ್ ಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.
ಗ್ರಾಮ ಪಂಚಾಯಿತಿ ಚುನಾವಣೆಯ ಅಂತಿಮ ಅಭ್ಯರ್ಥಿಗಳ ಬಗ್ಗೆ ಹಾಗೂ ಅವರ ಚಿನ್ಹೆಗಳ ಬಗ್ಗೆ ಅತ್ಯಂತ ಸೂಕ್ಷ್ಮವಾಗಿ ಪರಿಶೀಲಿಸಿ ,ತಪ್ಪು ಗಳು ಇಲ್ಲದಿರುವುದನ್ನು ಖಾತರಿ ಪಡಿಸಿಕೊಂಡು ತಹಸೀಲ್ದಾರ್ ನೇತೃತ್ವದಲ್ಲಿ ಪೊಲೀಸ್ ಭದ್ರತೆಯೊಂದಿಗೆ ಮತಪತ್ರಗಳ ಮುದ್ರಣ ಆಗಬೇಕು. ನಂತರ ಅವುಗಳನ್ನು ಉಪ ವಿಭಾಗಾಧಿಕಾರಿ ಪರಿಶೀಲನೆ ನಡೆಸಬೇಕು ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿಗಳನ್ನು ಸೆಕ್ಟರ್ ಅಧಿಕಾರಿಗಳಾಗಿ ನೇಮಸಿ ಹಾಗೂ ಒಬ್ಬರಿಗೆ 2 ರಿಂದ 3 ಪಂಚಾಯಿತಿಗಳ ಜವಾಬ್ದಾರಿ ವಹಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು .
ತಹಶೀಲ್ದಾರರು ಎಲ್ಲಾ ಮತಗಟ್ಟೆಗಳಿಗೆ ಭೇಟಿ ನೀಡಿ ಶೌಚಾಲಯ, ಕುಡಿಯುವ ನೀರು , ವಿದ್ಯುತ್ ಸಂಪರ್ಕ ವ್ಯವಸ್ಥೆ ಸಮರ್ಪಕವಾಗಿರುವುದನ್ನು ಖಾತರಿ ಪಡಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು .
ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಂ ಮತ್ತು ಎಲ್ಲಾ ತಾಲ್ಲೂಕಿನ ತಹಸೀಲ್ದಾರರು ವಿಡಿಯೋ ಸಂವಾದದಲ್ಲಿ ಭಾಗವಹಿಸಿದ್ದರು.