ಜಿಲ್ಲಾಧಿಕಾರಿ ಆರ್. ಗಿರೀಶ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಬಿ.ಎ ಪರಮೇಶ್ ಅವರು ಇಂದು ನಗರದ ಜಿಲ್ಲಾ ಕ್ರೀಡಾಂಗಣಕ್ಕೆ ಬೇಟಿ ನೀಡಿ ನ.1 ರಂದು ನಡೆಯುವ ಕನ್ನಡ ರಾಜ್ಯೋತ್ಸವದ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು.
ಉಪವಿಭಾಗಾಧಿಕಾರಿ ಬಿ.ಎ ಜಗದೀಶ್, ನಗರಸಭೆ ಆಯುಕ್ತರಾದ ಕೃಷ್ಣಮೂರ್ತಿ, ಜಿಲ್ಲಾ ವಾರ್ತಾಧಿಕಾರಿ ವಿನೋದ್ ಚಂದ್ರ, ತಹಶೀಲ್ದಾರ್ ಶಿವಶಂಕರಪ್ಪ ಹಾಗೂ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.