ಜಿಲ್ಲೆಯಲ್ಲಿಂದು ಹೊಸದಾಗಿ 07 ಕೋವಿಡ್ ಪ್ರಕರಣಗಳು ಪತ್ತೆ #covidupdateshassan

0

ಹಾಸನ.ಮಾ.08 (ಹಾಸನ್_ನ್ಯೂಸ್ !, ಜಿಲ್ಲೆಯಲ್ಲಿಂದು ಹೊಸದಾಗಿ 7 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 28,784 ಏರಿಕೆಯಾಗಿದೆ. ಆದರೆ ಜಿಲ್ಲಾಸ್ಪತ್ರೆಯಲ್ಲಿ 66 ಮಂದಿ ಸಕ್ರಿಯ ಸೋಂಕಿತರು ಮಾತ್ರ ಹಾಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈವರೆಗೆ 28,250 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ ಒಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 468 ಮಂದಿ ಸಾವನ್ನಪ್ಪಿದಾರೆ.

ಇಂದು ಪತ್ತೆಯಾದ 7 ಕೋವಿಡ್ ಪ್ರಕರಣಗಳಲ್ಲಿ ಹಾಸನ ತಾಲ್ಲೂಕಿನಲ್ಲಿ 3 ಮಂದಿ, ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ 2 ಮಂದಿ, ಅರಕಲಗೂಡು ಮತ್ತು ಹೊಳೆನರಸೀಪುರ ತಾಲ್ಲೂಕಿನಲ್ಲಿ  ಒಬ್ಬರಿಗೆ  ಕೋವಿಡ್ ದೃಡಪಟ್ಟಿದೆ -ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್

LEAVE A REPLY

Please enter your comment!
Please enter your name here