ಹಾಸನ: ತಮಿಳುನಾಡಿಗೆ ನೀರು ಹರಿಸಿರುವ ಸಂಬಂಧ ಮಂಡ್ಯದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಇದು ರಾಜಕೀಯ ಪ್ರೇರಿತ ಪ್ರತಿಭಟನೆಯಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ತಮಿಳುನಾಡಿಗೆ 32 ಟಿಎಂಸಿ ನೀರು ಬಿಡಬೇಕು. ಈಗಾಗಲೇ 24 ಟಿಎಂಸಿ ನೀರು ಬಿಡಲಾಗಿದೆ.
ಎಂಟು ಟಿಎಂಸಿ ನೀರು ಬಿಡಲು ತಮಿಳುನಾಡು ಸುಪ್ರೀಂ ಕೋರ್ಟ್ಗೆ ಮೊರೆ ಹೋಗಿದೆ. ಈ ಬಗ್ಗೆ ಪ್ರತಿಪಕ್ಷಗಳ ಸಭೆಯನ್ನು ಕರೆಯಲಾಗಿದ್ದು ರೈತರೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ವಿವರಿಸಿದರು. ಈ ಸಂದರ್ಭದಲ್ಲಿ ಸಂಸದ ಪ್ರಜ್ವಲ್ ರೇವಣ್ಣ , ಶಾಸಕರಾದ ಕೆ.ಎಂ ಶಿವಲಿಂಗೇಗೌಡ, ಸಿಮೆಂಟ್ ಮಂಜು, ಜಿಲ್ಲಾಧಿಕಾರಿ ಸತ್ಯಭಾಮ, ಎಸ್ ಪಿ ಹರಿರಾಂ ಶಂಕರ್, ಜಿ.ಪಂ. ಸಿಇಒ ಪೂರ್ಣಿಮಾ, ಇತರರು ಇದ್ದರು.