ಸಕಲೇಶಪುರ: ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಶನಿವಾರ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿದರು.
ವಿವಿಧ ಕನ್ನಡಪರ ಸಂಘಟನೆಗಳು ಕರೆದಿದ್ದ ಬಂದ್ ತಾಲ್ಲೂಕಿನಲ್ಲಿ ಸಂಪೂರ್ಣ ವಿಫಲವಾಯಿತು. ನಾರಾಯಣಗೌಡ ಬಣದ ಕರವೇ ಕಾರ್ಯಕರ್ತರು ನೇರವಾಗಿ ತಾಲ್ಲೂಕು ಕಚೇರಿ ಮುಂದೆ ಕೆಲವು ನಿಮಿಷಗಳ ಕಾಲ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮಂಜುನಾಥ್ ಅವರಿಗೆ ಮನವಿ ಸಲ್ಲಿಸಿದರು.
ಕರವೇ ತಾಲ್ಲೂಕು ಅಧ್ಯಕ್ಷ ದಿನೇಶ್ ಬಾಳ್ಳು, ಮಾತನಾಡಿ, ಕರ್ನಾಟಕದಲ್ಲಿ ಕನ್ನಡ ಭಾಷೆಯನ್ನು ಕಡೆಗಣಿಸಿ ಮರಾಠ ಅಭಿವೃದ್ಧಿ ನಿಗಮ ರಚನೆ ಮಾಡಿರುವ ರಾಜ್ಯ ಸರ್ಕಾರ ಕನ್ನಡಿಗರಿಗೆ ದ್ರೋಹ ಎಸಗಿದೆ. ಈ ನಿಗಮವನ್ನು ಕೂಡಲೆ ರದ್ದುಗೊಳಿಸದಿದ್ದರೆ, ರಾಜ್ಯದಾಧ್ಯಂತ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳಲಿದೆ ಎಂದರು.
ಯಡೇಹಳ್ಳಿ ಆರ್. ಮಂಜುನಾಥ್, ವೇದಿಕೆ ತಾಲ್ಲೂಕು ಘಟಕದ ಮಹಿಳಾ ಅಧ್ಯಕ್ಷೆ ಶೋಭಾ ಕೆಂಪೇಗೌಡ, ದೇವರಾಜ್, ಸುನಿಲ್, ಅಭಿ, ಸುರೇಶ್ ಇತರರು ಇದ್ದರು.
—