ಸರ್ಕಾರದ ಸೂಚನೆಯಂತೆ ಜಿಲ್ಲೆಯಲ್ಲಿ ಪ್ರತಿ ಕ್ವಿಂಟಾಲ್ಗೆ 3295ರೂ ಗಳಂತೆ ರಾಗಿ ಖರೀದಿಸಲು ಎಲ್ಲಾ ಅಗತ್ಯ ಸಿದ್ಧತೆ ಕೈಗೊಂಡು ಸ್ವೀಕೃತಿ ಕೇಂದ್ರಗಳನ್ನು ತೆರೆಯುವಂತೆ ಜಿಲ್ಲಾಧಿಕಾರಿ ಆರ್.ಗಿರೀಶ್ ನಿರ್ದೇಶನ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಅಧಿಕಾರಿಗಳ ಸಭೆ ನಡೆಸಿ ಅವರು 2020- 21 ನೇ ಸಾಲಿನಲ್ಲಿ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆಯೊಂದಿಗೆ ರಾಜ್ಯದಲ್ಲಿ 3ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಸಲು ಅನುಮತಿ ನೀಡಿದ್ದು ಅದರಂತೆ ಜಿಲ್ಲೆಯಲ್ಲಿ ರಾಗಿ ಖರೀದಿಗೆ ಹಾಸನ ಬೇಲೂರು ಹೊಳೆನರಸೀಪುರ ಬಾಣವಾರ, ಗಂಡಸಿ, ಜೆ.ಸಿ.ಪುರ, ಜಾವಗಲ್ ಹಾಗೂ ಚನ್ನರಾಯಪಟ್ಟಣದಲ್ಲಿ ಖರೀದಿ ಕೇಂದ್ರ ಪ್ರಾರಂಭಿಸುವಂತೆ ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಆಹಾರ ಧಾನ್ಯಗಳ ಸಂಗ್ರಹಣೆಗೆ ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ಪ್ರೂಟ್ಸ್ ದತ್ತಾಂಶದಿಂದ ರೈತರ ಮಾಹಿತಿಯನ್ನು ನೇರವಾಗಿ ಪಡೆದು ಕೃಷಿ ಇಲಾಖೆ ಒದಗಿಸಿರುವ ಸರಾಸರಿ ಬೆಳೆ ಮಾಹಿತಿಯನ್ವಯ ಹಾಗೂ ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ವಯ ಕನಿಷ್ಠ ಬೆಂಬಲ ಬೆಲೆ ಯೋಜನೆಗಳಡಿ ನೊಂದಣಿ ಮಾಡಿ ಶೀಘ್ರವಾಗಿ ರಾಗಿ ಖರೀದಿಸುವಂತೆ ಅವರು ಹೇಳಿದರು.
ಹಾಸನ ಜಿಲ್ಲೆಯಲ್ಲಿ ರಾಗಿ ಖರೀದಿಗೆ ಕರ್ನಾಟಕ ರಾಜ್ಯ ಸಹಕಾರ ಮಾರುಕಟ್ಟೆ ಮಹಾಮಂಡಳವನ್ನು ಸಂಗ್ರಹಣಾ ಏಜೆನ್ಸಿಯಾಗಿ ನೇಮಿಸಲಾಗಿದೆ. ಅಧಿಕಾರಿಗಳು ಅಗತ್ಯ ವ್ಯವಸ್ಥೆ ಮಾಡಿಕೊಂಡು ರೈತರಿಗೆ ನೋಂದಣಿ ಕಾರ್ಯ ಪ್ರಾರಂಭಿಸುವಂತೆ ಸೂಚಿಸಿದರು.
ಪ್ರತಿ ಖರೀದಿ ಕೇಂದ್ರಕ್ಕೆ ಕೃಷಿ ಇಲಾಖೆಯಿಂದ ಗ್ರೇಡರ್ ಗಳನ್ನು ನೇಮಿಸಬೇಕು ರೈತರು 12 ದರದಲ್ಲಿ ಗುಣಮಟ್ಟದ ಗೋಣಿಚೀಲಗಳನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ಖರೀದಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ರೈತರಿಂದ ಉತ್ಪಾದನಾ ಅನುಗುಣವಾಗಿ ಪ್ರತಿ ರೈತರಿಂದ ಪ್ರತಿ ಎಕರೆಗೆ 10 ಕ್ವಿಂಟಾಲ್ ನಂತೆ ಗರಿಷ್ಠ 50 ಕ್ವಿಂಟಾಲ್ ರಾಗಿ ಖರೀದಿಸುವಂತೆ ಜಿಲ್ಲಾಧಿಕಾರಿ ಹೇಳಿದರು.
2021 ರ ಜನವರಿ 31ರವರೆಗೆ ರೈತರ ನೋಂದಣಿಗೆ ಅವಕಾಶ ಇದ್ದು 15-12-2020 ರಿಂದ 15-03 2021 ವರಗೆ ಖರೀದಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಸಭೆಯಲ್ಲಿ ಆಹಾರ ಮತ್ತು ನಾಗಾರೀಕ ಸರಬರಾಜು ಉಪ ನಿರ್ದೇಶಕರಾದ ಪುಟ್ಟಸ್ವಾಮಿ, ಜಂಟಿ ನಿರ್ದೇಶಕರಾದ ರವಿ. ಹಾಗೂ ಮತ್ತಿತರರು ಪಾಲ್ಗೋಂಡಿದ್ದರು.