ರೈಲ್ವೆ ಮೇಲ್ವೇತುವೆ ಕಾಮಗಾರಿ ಪರಿಶೀಲಿಸಿದ ಸಂಸದ ಪ್ರಜ್ವಲ್ ರೇವಣ್ಣ , ಸ್ವರೂಪ್ ಪ್ರಕಾಶ್

0

ಹಾಸನ: ಕಳೆದ ಹಲವು ವರ್ಷಗಳಿಂದ ನಡೆಯುತ್ತಿರುವ ನಗರದ ರೈಲ್ವೆ ಮೇಲೇತುವೆ ಕಾಮಗಾರಿಯನ್ನು ಸಂಸದ ಪ್ರಜ್ವಲ್ ರೇವಣ್ಣ ಮತ್ತು ಶಾಸಕ ಎಚ್ ಪಿ ಸ್ವರೂಪ್ ಪರಿಶೀಲನೆ ನಡೆಸಿದರಲ್ಲದೆ ತೊರೆತಗತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು

ಕಾಮಗಾರಿಯನ್ನು ಪರಿಶೀಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದರು ಹಾಸನಂಬ ಜಾತ್ರಾ ಮಹೋತ್ಸವದ ಒಳಗೆ ಈ ಕಾಮಗಾರಿಯನ್ನು ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ನವಂಬರ್ ಒಳಗೆ ಎರಡು ಪಥದ ರಸ್ತೆಯನ್ನು ಜನರ ಅನುಕೂಲಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದರು.

ಸುಮಾರು 40 ಕೋಟಿ ವೆಚ್ಚದಲ್ಲಿ ನಡೆಯುತ್ತಿರುವ ಕಾಮಗಾರಿ ನಡೆಯುತ್ತಿದ್ದು ಈಗಾಗಲೇ ಎರಡು ಪಥದ ರಸ್ತೆ ಕಾಮಗಾರಿಯನ್ನ ನವಂಬರ್ ಒಳಗೆ ಪೂರ್ಣಗೊಳಿಸಲಾಗುವುದು ಹೆಚ್ಚಿನ ಅನುದಾನದ ಅವಶ್ಯಕತೆ ಇರುವುದರಿಂದ ಸಂಬಂಧಪಟ್ಟ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಅದು ಪೂರ್ಣಗೊಂಡ ನಂತರ ಟೆಂಡರ್ ಕರೆದು ಇನ್ನ ಆರು ಏಳು ತಿಂಗಳಲ್ಲಿ ಎಲ್ಲಾ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.

ಹಂಗರಹಳ್ಳಿ ರೈಲ್ವೆ ಮೇಲ್ ಸೇತುವೆ ಕಾಮಗಾರಿ ಅವೈಜ್ಞಾನಿಕ ಮತ್ತು ಕಳಪೆಯಿಂದ ಕೂಡಿದ್ದು ಈಗಾಗಲೇ ಮೂರು ಬಾರಿ ಬಿದ್ದಿದೆ ಅದೃಷ್ಟವಶಾತ್ ಯಾವುದೇ ರೀತಿ ಅಪಾಯ ಸಂಭವಿಸಿಲ್ಲ ಈ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು ಇದನ್ನ ತೆರವುಗೊಳಿಸಿ ಹೊಸ ರೈಲ್ವೆ ಮೇಲ್ ಸೇತುವೆ ಕಾಮಗಾರಿಯನ್ನು ನಿರ್ಮಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ಮೇಲ್ ಸೇತುವೆ ಕಾಮಗಾರಿ ಹೀಗೆ ಸಂಬಂಧಿಸಿದಂತೆ ಕಲಪ ಆಗಿರುವವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಮುಂದೆ ಈ ರೀತಿ ಆಗದಂತೆ ಅಧಿಕಾರಿಗಳು ನಿಗ ವಹಿಸಬೇಕು ಎಂದು ಸೂಚನೆ ನೀಡಿದರು ಈ ಸಂದರ್ಭದಲ್ಲಿ ಶಾಸಕ ಸ್ವರೂಪ್ ಅಧಿಕಾರಿಗಳು ಹಾಜರಿದ್ದರು

LEAVE A REPLY

Please enter your comment!
Please enter your name here