ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಆತ್ಮಸ್ಥೈರ್ಯ ತುಂಬಿ

0

ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರು ಮತ್ತು ಮಕ್ಕಳನ್ನು ಗುರುತಿಸಿ ಅವರಿಗೆ ನ್ಯಾಯ ದೊರಕಿಸಿವುದರ ಜೊತೆಗೆ ಮಾನಸಿಕ ಸ್ಥೈರ್ಯವನ್ನು ತುಂಬಿ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆಯಾದ ಆರ್. ಪ್ರಮೀಳಾ ನಾಯ್ಡು ಸೂಚನೆ ನೀಡಿದ್ದರೆ.

ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಏರ್ಪಡಿಸಿದ್ದ ಕೌಟುಂಬಿಕ ಕಲಹ, ಲೈಂಗಿಕ ಕಿರುಕುಳ, ಅತ್ಯಚಾರ,ವರದಕ್ಷಿಣೆ ವಿಷಯಗಳ ಕುರಿತು ಸಭೆ ನಡೆಸಿ ಮಾತನಾಡಿದ ಅವರು ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಪ್ರೀತಿ ಪ್ರೇಮದ ಬಲೆಯಲ್ಲಿ ಸಿಲುಕಿರುವಂತಹ 18 ವರ್ಷದೊಳಗಿನ ಮಕ್ಕಳನ್ನು ಗುರುತಿ ಮನಪರಿವರ್ತನೆ ಮಾಡಿ ಅವರ ಭವಿಷ್ಯದ ಬಗ್ಗೆ ಅರಿವನ್ನು ಮೂಡಿಸಿ ಎಂದರು.

ಬಾಲ್ಯವಿವಾಹ, ಮಾನಸಿಕ ಖಿನ್ನತೆಗೆ ಒಳಗಾಗಿರುವ ಮಕ್ಕಳು ಹಾಗೂ ಕಾಣೆಯಾಗುತ್ತಿರುವ ಮಕ್ಕಳ ಮೇಲೆ ಹೆಚ್ಚಿನ ನಿಗಾವಹಿಸಿ ಎಂದರಲ್ಲದೆ, ಅಂಗನವಾಡಿ ಕಾರ್ಯಕರ್ತರು ಮನೆಗಳಿಗೆ ಬೇಟಿ ನೀಡುವ ಸಂದರ್ಭದಲ್ಲಿ ಅವರ ಜೊತೆ ಉತ್ತಮ ಬಾಂದವ್ಯವಿಟ್ಟುಕೊಂಡು ಬಾಲ್ಯ ವಿವಾಹ ತಟೆಗಟ್ಟಲು ಮುಂದಾಗಿ ಎಂದು ಅವರುತಿಳಿಸಿದರು.

ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್. ನಂದಿನಿ ಅವರು ಮಾತನಾಡಿ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಮಕ್ಕಳಲ್ಲಿ ಬಾಲ್ಯ ವಿವಾಹ, ಲೈಂಗಿಕ ಕಿರುಕುಳ, ವರದಕ್ಷಿಣೆ ಕಿರುಕುಳ ಮುಂತಾದ ವಿಚಾರಗಳ ಬಗ್ಗೆ ಅರಿವನ್ನು ಮೂಡಿಸಿ ಎಂದರು.

18 ವರ್ಷದೊಳಗಿನ ಮಕ್ಕಳುಗಳು ಪ್ರೀತಿ ಪ್ರೇಮದಲ್ಲಿ ಸಿಲುಕಿದ್ದರೆ ಅಂತವರನ್ನು ಅದರಿಂದ ಹೊರತರಲು ಪ್ರಯತ್ನಿಸಿ ಎಂದರಲ್ಲದೆ, ಯಾವುದೇ ವರದಕ್ಷಿಣೆ ಕಿರುಕುಳ, ಬಾಲ್ಯವಿವಾಹ ಪದ್ದತಿ, ಲೈಂಗಿಕ ಕಿರುಕುಳಕ್ಕೆ ಸಂಬಂದಿಸಿದಂತೆ ಸದಾ ನಿಮಗೆ ಪೊಲೀಸ್ ಇಲಾಖೆಯ ಸಹಕಾರವಿರುತ್ತದೆ ಎಂದು ಹೇಳಿದರು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕರಾದ ದಿಲೀಪ್, ಸಿ.ಡಿ.ಪಿ.ಓ ಗಳು ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here