ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೇಶದ 13 ರಾಜ್ಯದ 46 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ವಿಡಿಯೋ ಸಂವಾದ ನಡೆಸಿದರು. ಕೇಂದ್ರ ಸಚಿವರಾದ ಅಮಿತ್ ಶಾ ಹಾಗೂ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಸೇರಿದಂತೆ ಹಲವು ಮುಖ್ಯಮಂತ್ರಿಗಳು ಇದರಲ್ಲಿ ಭಾಗವಹಿಸಿದ್ದರು.
ಬಿಬಿಎಂಪಿ ಆಯುಕ್ತರಾದ ಗೌರವ್ ಗುಪ್ತ ಹಾಗೂ ವಿವಿಧ ರಾಜ್ಯದ ಕೆಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳ ಅಭಿಪ್ರಾಯ ಹಾಗೂ ಕೋವಿಡ್ ನಿರ್ವಹಣೆಗೆ ಕೈಗೊಂಡಿರುವ ವಿನೂತನ ಕ್ರಮಗಳ ಸದ್ಯದ ಪರಿಸ್ಥಿತಿ, ಆಮ್ಲಜನಕ ನಿರ್ವಹಣೆ ಮತ್ತಿತರ ವಿಷಯಗಳ ಬಗ್ಗೆ ಪ್ರಧಾನ ಮಂತ್ರಿಯವರು ಮಾಹಿತಿ ಪಡೆದರು.
ಪ್ರತಿ ಜಿಲ್ಲೆಗಳಲ್ಲಿಯೂ ಕೋವಿಡ್ ಪರಿಸ್ಥಿತಿ ವಿಭಿನ್ನವಾಗಿದ್ದು ಹಲವು ಹೊಸ ಸ್ವರೂಪದಲ್ಲಿ ಅದನ್ನು ನಿಭಾಹಿಸಲಾಗುತ್ತಿದೆ ಲಭ್ಯ ಸಂಪನ್ಮೂಲದಲ್ಲಿ ವಿನೂತನ ಪ್ರಯೋಗ ಕೈಗೊಳ್ಳಲಾಗಿದೆ ಅದನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆ ನೀಡಿದರು.
ಎಲ್ಲಾ ಜಿಲ್ಲೆಗಳಲ್ಲಿ ವಾರ್ ರೂಂಗಳನ್ನು ಬಲಪಡಿಸಬೇಕು 60 ವರ್ಷಕ್ಕಿಂತ ಮೇಲ್ಪಟ್ಟ ಕೋವಿಡ್ ಸೋಂಕಿತರಿಗೆ ವಿಶೇಷ ನಿಗಾವಹಿಸಿ ಸೂಕ್ತ ಚಿಕಿತ್ಸೆ ಒದಗಿಸಿ ಆಯುಷ್ ಔಷಧಗಳನ್ನು ಸರಿಯಾಗಿ ಉಪಯೋಗಿಸಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು..
ಚುನಾಯಿತ ಪ್ರತಿನಿಧಿಗಳನ್ನು ಕೋವಿಡ್ ನಿಯಂತ್ರಣ ಹಾಗೂ ಜಾಗೃತಿ ಕಾರ್ಯದಲ್ಲಿ ಸಕ್ರೀಯರಾಗಿ ತೊಡಗಿಸಿಕೊಳ್ಳುವಂತೆ ಸಲಹೆ ನೀಡಿದ ಅವರು ಲಸಿಕೆ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ, ಸರಿಯಾದ ಕ್ರಮದಲ್ಲಿ ಸಲಹೆ ಮಾಡಿ ಉಳಿಸಿ ಹೆಚ್ಚಿನ ಸಂಖ್ಯೆ ಸೋಂಕಿತರಿಗೆ ಬಳಸಿ ಪ್ರತಿ ಗ್ರಾಮದಲ್ಲಿಯೂ ಸಹ ಕೋವಿಡ್ ತಡೆಗಟ್ಟಲು ಸಂಕಲ್ಪ ಮಾಡಿ ಕಾರ್ಯನಿರ್ವಹಿಸಿ ಎಂದು ಪ್ರೇರೆಪಿಸಿದರು.
ಪರಿಸ್ಥಿತಿಗನುಗುಣವಾಗಿ ಸ್ಥಳೀಯವಾಗಿ ಸೂಕ್ತ ನಿರ್ಧಾರಗಳನ್ನು ಕೈಗೊಂಡು ಕಂಟೈನ್‍ಮೆಂಟ್ ಜೋನ್‍ಗಳನ್ನು ಸ್ಥಾಪಿಸಿ ಜನರಿಗೆ ತೊಂದರೆಯಾಗದಂತೆ ಕಾರ್ಯನಿರ್ವಹಿಸಿ ಗ್ರಾಮೀಣ ಪ್ರದೇಶದಲ್ಲಿ ಈ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಹೆಚ್ಚಿನ ಗಮನಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಪಿ.ಎಮ್.ಕೇರ್ ಫಂಡ್‍ನಲ್ಲಿ ಆಕ್ಸಿಜನ್ ಪ್ಲಾಂಟ್‍ಗಳನ್ನು ಸ್ಥಾಪಿಸಿ, ಆಮ್ಲಜನಕವನ್ನು ಜವಾಬ್ದಾರಿಯಾಗಿ ನಿರ್ವಹಣೆ ಮಾಡಿ ತಮ್ಮ ಜಿಲ್ಲೆಯಲ್ಲಿ ಕೋವೀಡ್ ಸಂಪೂರ್ಣ ನಿರ್ಣಾಮ ಮಾಡಿದರೆ ಇದು ದೇಶದಿಂದಲೇ ತೊಡೆದು ಹಾಕಿದಂತೆ ಭಾವಿಸಿ ಕೆಲಸ ಮಾಡಿ ಎಂದು ಅವರು ಮನವಿ ಮಾಡಿದರು. ಮುಂಗಾರು ಸಮೀಪಿಸುತ್ತಿದ್ದು, ರೈತರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ವ್ಯವಸ್ಥಿತ ಯೋಜನೆಗಳನ್ನು ರೂಪಿಸಿ ಕೋವಿಡ್ ಹೋರಾಟದಲ್ಲಿ ಜಯಗಳಿಸಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಮಾತನಾಡಿದರು ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಮಾತನಾಡಿ ಅಂಕಿಅಂಶಗಳ ಪ್ರಸಾರ ಕೋವಿಡ್ ನಿರ್ವಹಣೆಯಲ್ಲಿ ಭಾರತದ ಸ್ಥಿತಿಗತಿ, ಪಾಸಿಟಿವಿಟಿ ಸಾವಿನ ಪ್ರಮಾಣ ಲಸಿಕೆ ಪ್ರಮಾಣಗಳ ವಿಶ್ಲೇಷಣಾತ್ಮಕ ವರದಿ ಮಂಡಿಸಿದರು. ದೇಶದಲ್ಲಿ ಎರಡನೇ ಅಲೆ ಹೆಚ್ಚಾದಾಗ ಜನಸಾಂದ್ರತೆಗೆ ಅನುಗುಣವಾಗಿ ಎಲ್ಲ ರೀತಿಯ ಅಂಕಿ ಅಂಶ ಪರಿಗಣಿಸಿ ಭಾರತ ಉತ್ತಮವಾಗಿದೆ ಎಂದು ಅವರು ಹೇಳಿದರು.
ಸಭೆಯಲ್ಲಿ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ, ಉಸ್ತುವಾರಿ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಜಿಲ್ಲಾಧಿಕಾರಿ ಆರ್.ಗಿರೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎ.ಪರಮೇಶ್, ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ, ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ||ಸತೀಶ್ ಮತ್ತಿತರರು ಹಾಜರಿದ್ದರು.