ಬಲ್ಕ್ ಡ್ರಗ್ ಪಾರ್ಕ್ ಸ್ಥಾಪನೆಗೆ ಪ್ರಸ್ತಾವನೆ: ಭಾರತ ಸರ್ಕಾರದ ‘ಬಲ್ಕ್ ಡ್ರಗ್ ಪಾರ್ಕ್ ಉತ್ತೇಜನ’ ಯೋಜನೆಯಡಿ ಯಾದಗಿರಿ ಜಿಲ್ಲೆಯ ಕಡೆಚೂರು ಕೈಗಾರಿಕಾ ಪ್ರದೇಶದ 1510 ಎಕರೆ ಪ್ರದೇಶದಲ್ಲಿ ಬಲ್ಕ್ ಡ್ರಗ್ ಪಾರ್ಕ್‍ನ್ನು ಸ್ಥಾಪಿಸುವ ಕುರಿತು ಭಾರತ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಈ ಯೋಜನೆಯ ಅಭಿವೃದ್ಧಿ ವೆಚ್ಚವು ರೂ.1446 ಕೋಟಿ ಅಂದಾಜಿಸಲಾಗಿದ್ದು, ಅದರಲ್ಲಿ ಭಾರತ ಸರ್ಕಾರದ ಪಾಲು ರೂ.1000 ಕೋಟಿ ಸಿಗುವ ನಿರೀಕ್ಷೆ ಇದೆ ಎಂದರು.
4 ತಿಂಗಳಲ್ಲಿ ಅನುಭವ ಮಂಟಪ ಕಾರ್ಯಾರಂಭ: ಮುಂಬರುವ ನಾಲ್ಕು ತಿಂಗಳಲ್ಲಿ ಬಸವ ಕಲ್ಯಾಣ ಪ್ರಾಧಿಕಾರದ ಆಶ್ರಯದಲ್ಲಿ, ಎಲ್ಲ ಕಾನೂನಿನ ಪ್ರಕ್ರಿಯೆ ಪೂರ್ಣಗೊಳಿಸಿ, ಅನುಭವ ಮಂಟಪ ಕಾರ್ಯಾರಂಭ ಮಾಡಲಾಗುವುದು.
ಕೈಪಿಡಿ ಬಿಡುಗಡೆ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಪ್ರದೇಶದಲ್ಲಿ ಕೈಗೊಂಡ ವಿವಿಧ ಅಭಿವೃದ್ಧಿ ಕಾಮಗಾರಿಗಳ ಮಾಹಿತಿಯುಳ್ಳ ಕೈಪಿಡಿಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬಿಡುಗಡೆ ಮಾಡಿದರು.
1115.32 ಕೋಟಿ ರೂ.ಗಳ ಕಾಮಗಾರಿಗೆ ಚಾಲನೆ: ಜಯದೇವ ಹೃದ್ರೋಗ ಸಂಸ್ಥೆಯ ಕಲಬುರಗಿ ಶಾಖೆಯ ನೂತನ ಕಟ್ಟಡ, ಕಲಬುರಗಿ ನಗರಕ್ಕೆ 24ಘಿ7 ಕುಡಿಯುವ ನೀರು ಸರಬರಾಜು ಕಾಮಗಾರಿ, ಕಲಬುರಗಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಏತ ನೀರಾವರಿ ಯೋಜನೆ ಅನುಷ್ಟಾನ, ಶ್ರೀ ಶರಣಬಸವೇಶ್ವರ ಕೆರೆ ಸಮಗ್ರ ಅಭಿವೃದ್ಧಿ ಕಾಮಗಾರಿ, ನೂತನ ಪೊಲೀಸ್ ಆಯುಕ್ತಾಲಯ ಕಟ್ಟಡ ಕಾಮಗಾರಿ, ರಸ್ತೆ ಸುಧಾರಣೆ, ಸಿಸಿ. ರಸ್ತೆ ಹೀಗೆ ವಿವಿಧ ಇಲಾಖೆಗಳ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಒಟ್ಟು 1115.32 ಕೋಟಿ ರೂ. ಬೃಹತ್ ಮೊತ್ತದ ಕಾಮಗಾರಿಗಳಿಗೆ ಶಿಲಾನ್ಯಾಸ ಮತ್ತು ಉದ್ಘಾಟನೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನೆರವೇರಿಸಿದರು.
ರಾಜ್ಯದ ಉಪಮುಖ್ಯಮಂತ್ರಿಗಳು, ಸಮಾಜ ಕಲ್ಯಾಣ, ಲೋಕೋಪಯೋಗಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಎಂ. ಕಾರಜೋಳ ಮಾತನಾಡಿ ಅತಿ ಹೆಚ್ಚು ಬಡವರು, ಗುಳೆ ಹೋಗುವವರು ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚಾಗಿದ್ದಾರೆ. ಹೀಗಾಗಿ ಪ್ರದೇಶದ ಅಭಿವೃದ್ಧಿಗೆ ನಮ್ಮ ಸರ್ಕಾರ ವಿಶೇಷ ಒತ್ತು ನೀಡುತ್ತಿದೆ ಎಂದರು.
ಸಮಾಜ ಕಲ್ಯಾಣ ಇಲಾಖೆಯಿಂದ ಈ ಭಾಗದಲ್ಲಿ 30 ಕೋಟಿ ರೂ. ವೆಚ್ಚದಲ್ಲಿ ವಸತಿ ನಿಲಯ ಮತ್ತು ವಸತಿ ಶಾಲೆಗಳನ್ನು ನಿರ್ಮಿಸಿದ್ದು, ಕೆಲವೊಂದು ಪೂರ್ಣಗೊಂಡಿವೆ. ಅವುಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ಇಂದು ಮುಖ್ಯಮಂತ್ರಿ ನೆರವೇರಿಸಿದ್ದಾರೆ. ದೇಶದಲ್ಲಿ ಮಾದರಿಯಾಗಿ ಎಸ್.ಸಿ.,ಎಸ್.ಟಿ. ಜನಾಂಗದ ಮಕ್ಕಳ ಶಿಕ್ಷಣಕ್ಕೆ ರಾಜ್ಯ ಸರ್ಕಾರ ವಿಶೇಷ ಒತ್ತು ನೀಡಿದೆ. ರಾಜ್ಯದಲ್ಲಿ 824 ವಸತಿ ಶಾಲೆ, 3009 ವಸತಿ ನಿಲಯಗಳಿದ್ದು, ಸುಮಾರು 4 ಲಕ್ಷಕ್ಕಿಂತ ಹೆಚ್ಚಿನ ಮಕ್ಕಳು ಇಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರಾದ ವೆಂಕಟರಾವ ಅರ್ಜುನರಾವ್ ಶಿಂಧೆ, ಶಿವಲಿಂಗಪ್ಪ ಬಸಲಿಂಗಪ್ಪ ಪಾಟೀಲ್, ಭೀಮರಾವ ರೇವಣಸಿದ್ದಪ್ಪ ಕೊಟ್ಟರಗಿ, ವಿಜಯಕುಮಾರ ಪ್ರಭಾಕರ್ ತಡಕಲ್ ಹಾಗೂ ಶಂಕರೆಪ್ಪ ರಾಮಶೆಟ್ಟಪ್ಪ ಹುಗ್ಗಿ ಅವರನ್ನು ಮುಖ್ಯಮಂತ್ರಿಗಳು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕ ಡಾ.ಅಜಯ ಸಿಂಗ್, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ರಾಜಕುಮಾರ ಪಾಟೀಲ ತೇಲ್ಕೂರ, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕøತಿಕ ಸಂಘದ ಅಧ್ಯಕ್ಷ ಹಾಗೂ ಮಾಜಿ ಸಂಸದ ಡಾ. ಬಸವರಾಜ ಪಾಟೀಲ ಸೇಡಂ, ಸಂಸದ ಡಾ. ಉಮೇಶ ಜಾಧವ್, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ಅಧ್ಯಕ್ಷೆ ಶಶಿಕಲಾ ವಿ. ಟೆಂಗಳಿ, ಶ್ರೀ ನಿಜಶರಣ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್, ಶಾಸಕರಾದ ಬಸವರಾಜ ಮತ್ತಿಮೂಡ ಡಾ.ಅವಿನಾಶ್ ಜಾಧವ್, ವಿಧಾನ ಪರಿಷತ್ತಿನ ಶಾಸಕರಾದ ಬಿ.ಜಿ. ಪಾಟೀಲ್, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಡಾ.ಎನ್.ವಿ.ಪ್ರಸಾದ, ಐ.ಜಿ.ಪಿ. ಮನೀಷ್ ಖರ್ಬಿಕರ್, ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ, ಕಲಬುರಗಿ ನಗರ ಪೊಲೀಸ್ ಆಯುಕ್ತ ಸತೀಷ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿಮಿ ಮರಿಯಮ್ ಜಾರ್ಜ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪಿ. ರಾಜಾ, ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರಾಹುಲ ಪಾಂಡ್ವೆ, ಮಹಾನಗರ ಪಾಲಿಕೆಯ ಆಯುಕ್ತ ಸ್ನೇಹಲ್ ಸುಧಾಕರ್ ಲೋಖಂಡೆ, ಐ.ಎ.ಎಸ್.ಪ್ರೋಬೇಷನರ್ ಅಧಿಕಾರಿ ಆಕಾಶ ಸೇರಿದಂತೆ ಇನ್ನಿತರ ಜನಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು. ಕಲ್ಯಾಣ ಕರ್ನಾಟಕ ಪ್ರದೇ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ವಂದಿಸಿದರು.
ಸರ್ದಾರ ವಲ್ಲಭಭಾಯಿ ಪಟೇಲ್ ಮೂರ್ತಿಗೆ ಮಾಲಾರ್ಪಣೆ:- ರಾಷ್ಟ್ರಧ್ವಜಾರೋಹಣ ಕಾರ್ಯಕ್ರಮಕ್ಕೂ ಮುನ್ನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಲಬುರಗಿ ನಗರದ ಎಸ್.ವಿ.ಪಿ. ವೃತ್ತದಲ್ಲಿರುವ ಸರ್ದಾರ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ಮುಖ್ಯಮಂತ್ರಿಗಳಿಗೆ ಸಂಸದರು, ಶಾಸಕರು ಸಾಥ್ ನೀಡಿದರು.