ಮಂಗಳೂರು/ಹಾಸನ/ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ.ಅತೀಕ್ , ರಾಷ್ಟ್ರೀಯ ಹೆದ್ದಾರಿ–75ರಲ್ಲಿ ಶಿರಾಡಿ ಘಾಟಿಯಲ್ಲಿ ಸುರಂಗ ಹಾಗೂ ವಯಡಕ್ಟ್‌ಗಳನ್ನು ನಿರ್ಮಿಸುವ ‘ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್ ವೇ’ ಯೋಜನೆ ಜಾರಿ ಸಾಧ್ಯತೆ ಬಗ್ಗೆ ಪರಿಶೀಲಿಸುವಂತೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದೆ
ಆರು ಸುರಂಗಗಳು ಹಾಗೂ ಒಟ್ಟು 11 ಕಿ.ಮೀ ಉದ್ದದ ವಯಡಕ್ಟ್‌ಗಳನ್ನು ನಿರ್ಮಿಸುವ ಪ್ರಸ್ತಾವ ಇದೆ. ಇದರ ಕಾರ್ಯಸಾಧ್ಯತೆ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ಮಂಗಳೂರು– ಬೆಂಗಳೂರು ನಡುವೆ 5 ಗಂಟೆಗಳಲ್ಲಿ ಪ್ರಯಾಣಿಸಲು ಸಾಧ್ಯವಾಗುವಂತಹ ಹೆದ್ದಾರಿ ನಿರ್ಮಾಣವಾದರೆ ಜಿಲ್ಲೆಯ ಅಭಿವೃದ್ಧಿಗೆ ವೇಗ ಸಿಗಲಿದೆ’ ಎಂದರು.