72ನೇ ಗಣರಾಜ್ಯೋತ್ಸವ ಅಂಗವಾಗಿ ಇಂದು ಜಿಲ್ಲಾ ಕ್ರೀಡಾಂಗಣದಲ್ಲಿ ಅಬಕಾರಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ರವರು ಧ್ವಜಾರೋಹಣ ನೆರವೇರಿಸಿ ಪೊಲೀಸ್ ತುಕಡಿ ಹಾಗೂ ಪಥಸಂಚಲನ ತಂಡಗಳಿಂದ ಗೌರವ ರಕ್ಷೆ ಸ್ವೀಕರಿಸಿದರು ಗಣರಾಜ್ಯೋತ್ಸವ ಸಂದೇಶವನ್ನು ನೀಡಿದರು.
ಇದೇ ವೇಳೆಯಲ್ಲಿ ವಿವಿಧ ಕೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಜಿಲ್ಲೆಯ ಗಣ್ಯರಿಗೆ ಸನ್ಮಾನ ಮಾಡಲಾಯಿತು.
ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಸಾಂಸ್ಕøತಿಕ ಕಾರ್ಯಕ್ರಮ ಹಾಗೂ ಪೊಲೀಸ್ ಇಲಾಖೆಯಿಂದ ಶ್ವಾನ ಪ್ರದರ್ಶನ, ಅಗ್ನಿ ಶಾಮಕ ಇಲಾಖೆಯಿಂದ ಅಗ್ನಿ ಸುರಕ್ಷತೆ ಬಗ್ಗೆ ಅರಿವು ಕಾರ್ಯಕ್ರಮ ನೀಡಲಾಯಿತು. ಪೊಲೀಸ್ ಇಲಾಖೆಯಿಂದ ಇ.ಆರ್.ಎಸ್.ಎಸ್ 112 ಕರೆಯ ವಾಹನಗಳಿಗೆ ಸಚಿವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ವಿವಿಧ ಇಲಾಖೆಗಳಿಂದ ಸ್ತಬ್ದ ಚಿತ್ರಗಳ ಪ್ರದರ್ಶನ ನಡೆಸಲಾಯಿತು.
ಶಾಸಕರಾದ ಪ್ರೀತಂ ಜೆ. ಗೌಡ, ಜಿ.ಪಂ ಅಧ್ಯಕ್ಷರಾದ ಶ್ವೇತಾ ದೇವರಾಜ್, ಜಿಲ್ಲಾಧಿಕಾರಿ ಆರ್.ಗಿರೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ ಗೌಡ, ಜಿ.ಪಂ ಮುಖ್ಯ ಕಾರ್ಯನಿರ್ವಣಾಧಿಕಾರಿ ಡಿ. ಭಾರತಿ, ಮಾಜಿ ಉಪ ಮೇಯರ್ ಹೇಮಾವತಿ ಗೋಪಾಲಯ್ಯ, ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಂ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್. ನಂದಿನಿ ಮತ್ತಿತರರು ಸೇರಿದಂತೆ ಹಲವು ಗಣ್ಯರು ಇದ್ದರು.