ಅನಾಥ ಮಕ್ಕಳ ಆರೈಕೆ ನಮ್ಮ ಜವಾಬ್ದಾರಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಹಾಸನದಲ್ಲಿ ಇಂದು

0

ಹಾಸನ : (ಹಾಸನ್_ನ್ಯೂಸ್ !, ಇಂದು ಹಾಸನದಲ್ಲಿ, ಸಂಭಾವನೀಯ ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ಧತೆ ಹಾಗೂ ಅನಾಥ ಮಕ್ಕಳ ಆರೈಕೆ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ,

ಸಮಾಲೋಚನೆ ನಡೆಸಿದ ಸಚಿವೆ ಕೋವಿಡ್ ಸೋಂಕಿತರಾದ ಮಕ್ಕಳ ಚಿಕಿತ್ಸೆಗಾಗಿ ಜಿಲ್ಲಾ ಹಾಗೂ

ತಾಲ್ಲೂಕು ಆಸ್ಪತ್ರೆಗಳಲ್ಲಿ ಬೆಡ್ ವ್ಯವಸ್ಥೆ ಹಾಗೂ ಮಕ್ಕಳೊಂದಿಗೆ ಅವರ ತಾಯಂದಿರಿಗೂ ಉಳಿದುಕೊಳ್ಳಲು ವ್ಯವಸ್ಥೆ ಮಾಡುತ್ತಿರುವ ವಿಷಯ ತಿಳಿಸಿದರು ,  ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್, ಎನ್ ಐಸಿಯು, ಪಿಐಸಿಯು, ವೆಂಟಿಲೇಟರ್ ಅಳವಡಿಕೆಗೆ ಸಿದ್ಧತೆ ನಡೆಯುತ್ತಿದ್ದು. ಜಿಲ್ಲೆಯಲ್ಲಿ ಮಕ್ಕಳ ತಜ್ಞರ ಕೊರತೆಯಾಗಬಾರದು.  ಇಲಾಖೆ ವತಿಯಿಂದ ಎಲ್ಲಾ ತಾಲ್ಲೂಕುಗಳಲ್ಲಿ ಕೋವಿಡ್ ಕೇರ್ ಸೆಂಟರ್ ಗೆ ಸ್ಥಳ ಗುರುತಿಸಿದ್ದು, ಸಿದ್ಧತೆ ನಡೆಯುತ್ತಿದೆ. ಅಪೌಷ್ಟಿಕ ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚಾಗಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು

ಹಾಸನ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಮಾನ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆಯವರ ಅಧ್ಯಕ್ಷತೆಯಲ್ಲಿ ಸಂಭಾವನೀಯ ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ಧತೆ ಹಾಗೂ

ಅನಾಥ ಮಕ್ಕಳ ಆರೈಕೆ ಕುರಿತು ಅಧಿಕಾರಿಗಳೊಂದಿಗೆ ಸಭೆ ಮತ್ತು ಸಮಾಲೋಚನೆ ನಡೆಸಲಾಯಿತು. ಕೋವಿಡ್ ಸೋಂಕಿತರಾದ ಮಕ್ಕಳ ಚಿಕಿತ್ಸೆಗಾಗಿ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಬೆಡ್ ವ್ಯವಸ್ಥೆ ಹಾಗೂ ಮಕ್ಕಳೊಂದಿಗೆ ಅವರ ತಾಯಂದಿರಿಗೂ ಉಳಿದುಕೊಳ್ಳಲು ವ್ಯವಸ್ಥೆ ,  ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್, ಎನ್ ಐಸಿಯು, ಪಿಐಸಿಯು, ವೆಂಟಿಲೇಟರ್ ಅಳವಡಿಕೆಗೆ ಸಿದ್ಧತೆ ನಡೆಯುತ್ತಿದೆ. ಜಿಲ್ಲೆಯಲ್ಲಿ ಮಕ್ಕಳ ತಜ್ಞರ ಕೊರತೆಯಾಗಬಾರದು. ನಮ್ಮ ಇಲಾಖೆ ವತಿಯಿಂದ ಎಲ್ಲಾ ತಾಲ್ಲೂಕುಗಳಲ್ಲಿ ಕೋವಿಡ್ ಕೇರ್ ಸೆಂಟರ್ ಗೆ ಸ್ಥಳ ಗುರುತಿಸಿದ್ದು, ಸಿದ್ಧತೆ ನಡೆಯುತ್ತಿದ್ದು. ಅಪೌಷ್ಟಿಕ ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚಾಗಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಸಚಿವೆ  ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹಾಜರಿದ್ದರು.

ಅಂತೆಯೆ ಸ್ಥಳೀಯ ಶಾಸಕರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹಾಜರಿದ್ದರು.

#KarnatakaFightsCorona | #Hassan | #ಹಾಸನ #ChiefMinisterofKarnataka  #MinistryofWomenandChildDevelopment #GovernmentofIndia | #SmritiZubinIrani | #DIPRKarnataka | #DDNewsLive

LEAVE A REPLY

Please enter your comment!
Please enter your name here