ಹಾಸನ: ಜಿಲೆಯ ವಿವಿಧ ಕಾಲೇಜುಗಳಲ್ಲಿ ಶಿಕ್ಷಣ ಕಲಿಕೆಗೆ ಕೇರಳದಿಂದ ಆಗಮಿಸಿರುವ ವಿದ್ಯಾರ್ಥಿಗಳನ್ನು ಮೊದಲು ಐಸೋಲೇಶನ್ ಮಾಡಿ, ಮತ್ತೊಮ್ಮೆ ಕೋವಿಡ್ ಪರೀಕ್ಷೆಗೊಳಪಡಿಸಿ ನೆಗೆಟಿವ್ ವರದಿ ಬಂದ ನಂತರವೇ ತರಗತಿಗಳಿಗೆ ಹಾಜರಾಗಲು ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿ ಆರ್ ಗಿರೀಶ್ ಅವರು ಸೂಚಿಸಿದ್ದಾರೆ.
ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಕೊವಿಡ್ ಪಾಸಿಟಿವ್ ವರದಿಗಳು ಬಂದಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು ಕೇರಳದಿಂದ ಬರುವ ಎಲ್ಲಾ ನರ್ಸಿಂಗ್ ಹಾಗೂ ಇತರ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಆರ್ ಟಿ ಪಿ. ಸಿ ಆರ್ ಪರೀಕ್ಷೆಗೆ ಮಾಡಿಸಿ ಸೋಂಕು ಹರಡದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ವಹಿಸುವಂತೆ ನಿರ್ದೇಶನ ನೀಡಿದರು.
ಪ್ರತಿಯೊಂದು ವಿದ್ಯಾರ್ಥಿಗಳಿಗೂ ಕೋವಿಡ್ ಮೊದಲೇ ಡೋಸ್ ಲಸಿಕೆ ನೀಡಿರಬೇಕು. ಪ್ರತಿ ವಿದ್ಯಾರ್ಥಿಗಳಿಗೂ 15 ದಿನಕ್ಕೊಮ್ಮೆ ಕಡ್ಡಾಯ ಕೋವಿಡ್ ಪರೀಕ್ಷೆ ಮಾಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದರು .
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ , ತಾಲ್ಲೂಕು ವೈದ್ಯಾಧಿಕಾರಿ ಡಾ. ವಿಜಯ್ ಹಾಗೂ ಮತ್ತಿತರರು ಹಾಜರಿದ್ದರು.