ಅರ್ಜಿ ಅಹ್ವಾನ
ಹಾಸನ ಆ.20 : ಹಾಸನ ಜಿಲ್ಲೆಯಲ್ಲಿ ಮೆಟ್ರಿಕ್ ಪೂರ್ವ/ ಮೆಟ್ರಿಕ್ ನಂತರದ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮತೀಯ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ಜನಾಂಗದ ಬಾಲಕರ ಹಾಗೂ ಬಾಲಕಿಯರ ಶಿಕ್ಷಣಕ್ಕೆ ಅನುಕೂಲವಾಗುವಂತೆ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿನಿಲಯಗಳಿಗೆ ಉಚಿತ ಪ್ರವೇಶಕ್ಕಾಗಿ ಅರ್ಜಿಗಳನ್ನು ಅಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.
ಮೆಟ್ರಿಕ್ ನಂತರದ ಕೋರ್ಸ್ಗಳಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಊಟ, ವಸತಿ ಹಾಗೂ ಉಚಿತ ಗ್ರಂಥಾಲಯ ಸೌಕರ್ಯವನ್ನು ಕಲ್ಪಿಸಲಾಗಿದ್ದು, ಈ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ಈ ಕೆಳಕಂಡ ನಿಬಂಧನೆಗಳನ್ನು ಪೂರೈಸಬೇಕಾಗುತ್ತದೆ.
ನಿಬಂಧನೆಗಳು:-
ವಿದ್ಯಾರ್ಥಿಗಳು ಮತೀಯ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿದವರಾಗಿರಬೇಕು. ಸರ್ಕಾರಿ ಅಥವಾ ಅಂಗೀಕೃತ ಶಾಲಾ/ ಕಾಲೇಜುಗಳಲ್ಲಿ ಮೆಟ್ರಿಕ್ ಪೂರ್ವ/ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಕುಟುಂಬದ ವಾರ್ಷಿಕ ವರಮಾನವು ರೂ 2.50 ಲಕ್ಷಕ್ಕೆ ಮೀರಿರಬಾರದು
ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಶೇ 85 ರಿಂದ 90 ಹಾಗೂ ನಗರ ಪ್ರದೇಶದ ಅಭ್ಯರ್ಥಿಗಳಿಗೆ ಶೇ 10 ರಿಂದ 15 ರಷ್ಟು ಸ್ಥಾನಗಳನ್ನು ನೀಡಲಾಗುವುದು.
ವಿದ್ಯಾರ್ಥಿನಿಲಯಕ್ಕೆ ಪ್ರವೇಶ ಬಯಸುವ ಅಭ್ಯರ್ಥಿಗಳು ತಮ್ಮ ಹಿಂದಿನ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲಿ ಉತ್ತೀರ್ಣರಾಗಿರಬೇಕು.
ವಿದ್ಯಾರ್ಥಿನಿಲಯಗಳ ವಿವರ
ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ, ಗುಡ್ಡೇನಹಳ್ಳಿ, ಹಾಸನ ತಾ||, ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ, ಸಾಲಗಾಮೆರಸ್ತೆ ಹಾಸನ, ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ, (ಸ್ಥಳಾಂತರ 1) ಸಾಲಗಾಮೆರಸ್ತೆ ಹಾಸನ, ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ, (ಸ್ಥಳಾಂತರ 2) ಸಾಲಗಾಮೆರಸ್ತೆ ಹಾಸನ, ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ, ನಾಗಲಪುರ, ಹೊಳನರಸೀಪುರ ತಾಲ್ಲೂಕು, ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ, ಜೇನುಕಲ್ ನಗರ, ಅರಸೀಕೆರೆ. ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ, ಚನ್ನರಾಯಪಟ್ಟಣ ತಾಲ್ಲೂಕು, ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ, ಬಂಟೇನಹಳ್ಳಿ ಬೇಲೂರು ತಾಲ್ಲೂಕು, ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ, ಆಲೂರು, ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ, ಚನ್ನರಾಯಪಟ್ಟಣ, ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ, ಸಕಲೇಶಪುರ.
ನಿಗಧಿತ ಅರ್ಜಿ ನಮೂನೆಯನ್ನು ಸಂಬಂಧಪಟ್ಟ ವಿದ್ಯಾರ್ಥಿನಿಲಯ/ಜಿಲ್ಲಾ ಕಛೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿ ನಮೂನೆಗಳನ್ನು ಎಲ್ಲಾ ದಾಖಾಲಾತಿಗಳೊಂದಿಗೆ ಸೆಪ್ಟೆಂಬರ್ 4ರೊಳಗೆ ವಿದ್ಯಾರ್ಥಿನಿಲಯ ಅಥವಾ ಜಿಲ್ಲಾ ಕಛೇರಿಗೆ ಸಲ್ಲಿಸಬಹುದಾಗಿದೆ.
ಅರ್ಜಿ ಜೊತೆ ಸಲ್ಲಿಸಬೇಕಾದ ದಾಖಲಾತಿಗಳು: ಅರ್ಜಿ ನಮೂನೆ, ಸಂಬಂಧಪಟ್ಟ ತಹಸೀಲ್ದಾರ್ ರವರಿಂದ ಪಡೆದಿರುವ ಜಾತಿ ಮತ್ತು ಆದಾಯ ದೃಡೀಕರಣ ಪತ್ರ, ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ಬಗ್ಗೆ ಕಾಲೇಜಿನ ಮುಖ್ಯಸ್ಥರು ಅರ್ಜಿಯಲ್ಲಿ ದೃಡೀಕರಿಸಿದ ದೃಡೀಕರಣ ಪತ್ರ. ವಿದ್ಯಾರ್ಥಿಯು ಕಳೆದ ಸಾಲಿನಲ್ಲಿ ವ್ಯಾಸಂಗ ಮಾಡಿರುವ ಅಂಕಪಟ್ಟಿಯ ಪ್ರತಿ. ವಿದ್ಯಾರ್ಥಿಯ ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ, ವಿದ್ಯಾರ್ಥಿಯು ಹೊಂದಿರುವ ಬ್ಯಾಂಕ್ ಖಾತೆಯ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ ನೀಡಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸ ಬೇಕಾದ ವಿಳಾಸ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಆಕಾಶವಾಣಿ ಹಿಂಭಾಗ, ಸಾಲಗಾಮೆ ಮುಖ್ಯ ರಸ್ತೆ, ಹಾಸನ. ದೂರವಾಣಿ ಸಂಖ್ಯೆ: 08172-267373 / 08172-268373 ಸಂಪರ್ಕಿಸಬಹುದಾಗಿದೆ.