ಕೋವಿಡ್-19 ರ ಸಲುವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಾಸನ ಇಲ್ಲಿ ಖಾಲಿ ಇರುವ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ಹುದ್ದೆಗಳನ್ನು 6 ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹಾಸನ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಖಾಲಿ ಇರುವ 82 ಹುದ್ದೆಗಳಿಗೆ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಹೊಂದಿರಬೇಕು.
ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಕಿ.ಮ.ಆ.ಸ ತರಬೇತಿ ಪ್ರಮಾಣ ಪತ್ರ ಮತ್ತು ಅಂಕಪಟ್ಟಿ, ಚಾಲ್ತಿಯಲ್ಲಿರುವ ನರ್ಸಿಂಗ್ ಕೌನ್ಸಿಲ್ ನೊಂದಣಿ ಪತ್ರ, ಆಧಾರ್ ನೊಂದಣಿ ಪತ್ರ (ಮೊಬೈಲ್ ಸಂಖ್ಯೆ ನಮೂದಿಸುವುದು), ಭಾವಚಿತ್ರದೊಂದಿಗೆ ಸೆ.28ರೊಳಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.