ಆಲೂರಿನಲ್ಲಿ ಉದ್ಯೋಗ ಖಾತರಿ ಯೋಜನೆಗೆ ಚಾಲನೆ

0

ಆಲೂರು- ಆಲೂರು ತಾಲ್ಲೂಕಿನ ಕೆ.ಹೊಸಕೋಟೆ ಹೋಬಳಿಯ ಮಲ್ಲಾಪುರ ಗ್ರಾಮ ಪಂಚಾಯ್ತಿಯ ಆವರಣದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಮತ್ತು 14 ಹಾಗೂ 15 ನೇ ಹಣಕಾಸು ಯೋಜನೆ ಲೆಕ್ಕಪರಿಶೋಧನಾ ಗ್ರಾಮಸಭೆ ನಡೆಯಿತು. ಲೆಕ್ಕ ಪರಿಶೋಧನಾ ಗ್ರಾಮ ಸಭೆಯನ್ನು ಅಧ್ಯಕ್ಷೆ ಮಮತಾ ಅಣ್ಣೇಗೌಡ ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ತಾಲ್ಲೂಕು ನೋಡಲ್ ಅಧಿಕಾರಿ ಶರತ್, ಸಂಯೋಜಕ ರವಿ, ಮಲ್ಲಾಪುರ ಗ್ರಾಮ ಪಂಚಾಯ್ತಿ ಪಿಡಿಒ ರುದ್ರೇಗೌಡ, ಕಾರ್ಯದರ್ಶಿ ಪರಮೇಶ್, ಗ್ರಾ.ಪಂ ಸದಸ್ಯೆ ಹಾಗೂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಕಮಲಮ್ಮ, ಗ್ರಾಮ ಪಂಚಾಯ್ತಿ ಸದಸ್ಯರಾದ ಚಂದ್ರಶೇಖರ್, ಕುಮಾರ್, ಹರಿಹಳ್ಳಿ ಚಂದ್ರು, ಚಂದನ್, ಅಕ್ಷತಾ ಸೇರಿದಂತೆ ಎಲ್ಲಾ ಸದಸ್ಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here