ಮಾಧ್ಯಮ ಪ್ರತಿನಿಧಿಗಳಿಗೆ ಆರೋಗ್ಯ ಕಾರ್ಡ್ ವಿತರಣೆ

0

ಹಾಸನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖಾ ವತಿಯಿಂದ ಜಿಲ್ಲೆಯಲ್ಲಿ ಮಾನ್ಯತೆ ಪಡೆದ ಪತ್ರಕರ್ತರು ಹಾಗೂ ಅವರ ಕುಟುಂಬದವರಿಗೆ ಆರೋಗ್ಯ ಕಾರ್ಡ್‍ಗಳನ್ನು ವಿತರಿಸಲಾಯಿತು.
ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ರಾಜ್ಯ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ವಿನೋದ್ ಚಂದ್ರ ಅವರು ಮಾಧ್ಯಮ ಪ್ರತಿನಿಧಿಗಳಿಗೆ ಆರೋಗ್ಯ ಕಾರ್ಡ್ ವಿತರಿಸಿದರು.
ಇದೇ ವೇಳೆ ಪತ್ರಕರ್ತ ಸಂಘದ ರಾಜ್ಯ ಅಧ್ಯಕ್ಷರಾದ ಶಿವಾನಂದ ತಗಡೂರು, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ರವಿನಾಕಲಗೂಡು ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷರಾದ ಪ್ರಸನ್ನ ಕುಮಾರ್ ಅವರು ಮಾತನಾಡಿ ಮಾಧ್ಯಮ ಪ್ರತಿನಿಧಿಗಳ ಬಹುದಿನಗಳ ಬೇಡಿಕೆ ಈಗ ಈಡೇರಿದೆ. ಇದು ಶೀಘ್ರವೇ ಇತರ ಮಾನ್ಯತೆ ಪಡೆದ ಪತ್ರಕರ್ತ ಪ್ರತಿನಿಧಿಗಳಿಗೆ ಲಭ್ಯವಾಗಲಿದೆ ಎಂದು ವ್ಯಕ್ತಪಡಿಸಿದರು.

ಮಾಧ್ಯಮ ಪ್ರತಿನಿಧಿಗಳ ಹಿತ ಕಾಯುತ್ತಿರುವ ಎಲ್ಲವನ್ನೂ ಸಮನಾಗಿ ಸ್ವೀಕರಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಹರ್ಷ ಅವರಿಗೆ ಅಭಿನಂದನೆ ಹಾಗೂ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ತಿಳಿಸಿದರು.
ಜಿಲ್ಲಾ ವಾರ್ತಾಧಿಕಾರಿ ವಿನೋದ್ ಚಂದ್ರ ಅವರು ಮಾತನಾಡಿ ಶೀಘ್ರವೇ ಇಂತಹ ಹೆಚ್ಚು ಸೌಲಭ್ಯಗಳನ್ನು ಮಾಧ್ಯಮ ಪ್ರತಿನಿಧಿಗಳಿಗೆ ದೊರಕುವಂತಾಗಲಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪತ್ರಕರ್ತ ಸಂಘದ ಕಾರ್ಯದರ್ಶಿ ಕೆ.ಜಿ. ಸುರೇಶ್, ರಾಷ್ಟ್ರೀಯ ಮಂಡಳಿ ಸದಸ್ಯರಾದ ಅತಿಖುರ್ ರೆಹಮಾನ್ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಉಪಾಧ್ಯಕ್ಷರಾದ ಪ್ರಕಾಶ್ ಅವರು ಕಾರ್ಯಕ್ರಮದಲ್ಲಿ ಹಾಜರಿದ್ದರು.

LEAVE A REPLY

Please enter your comment!
Please enter your name here