ಭಾರತೀಯ ವೈದ್ಯಕೀಯ ಸಂಘದ ವತಿಯಿಂದ ಕೋವಿಡ್-19 ವಿರುದ್ಧ ವಿವಿಧ ರೀತಿಯ ಜನ ಜಾಗೃತಿ ಅಭಿಯಾನ ಪ್ರಾರಂಭವಾಗಿದೆ.
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಭಾರತೀಯ ವೈದ್ಯಕೀಯ ಸಂಘದ ಜಾಗೃತಿ ಚಟುವಟಿಕೆಗಳಿಗೆ ಸಾಂಕೇತಿಕವಾಗಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಆರ್. ಗಿರೀಶ್ ಕೊರೋನಾ ಸೋಂಕು ಎಲ್ಲಾ ಜಿಲ್ಲೆಯಲ್ಲಿ ವ್ಯಾಪಕವಾಗಿ ಹೆಚ್ಚುತ್ತಿದ್ದು, 355 ಮಂದಿ ಈಗಾಗಲೇ ಪ್ರಾಣ ಕಳೆದುಕೊಂಡಿದ್ದಾರೆ. ಇದಕ್ಕೆ ಔಷಧಿ ಕಂಡುಹಿಡಿಯುವವರೆಗೆ ಎಲ್ಲರೂ ಸಹಕರಿಸಬೇಕಾಗಿದೆ ಎಂದರು.
ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಇದರಿಂದ ಕೊರೋನಾ ಸೋಂಕು ನಿಯಂತ್ರಣ ಸಾಧ್ಯ. ನಿಯಮ ಉಲ್ಲಂಘಿಸಿದವರ ವಿರುದ್ಧ ದಂಡ ವಸೂಲಿ ಮಾಡಲಾಗುತ್ತದೆ ಸಾರ್ವಜನಿಕರು ಸಹಕರಿಸುವಂತೆ ಜಿಲ್ಲಾಡಳಿತವು ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸೋಂಕು ತಗಲುವ ಸಾಧ್ಯತೆಗಳಿವೆ. ಹಾಗಾಗಿ ಜನರು ಸ್ವಯಂ ಪ್ರೇರಣೆಯಿಂದ ಪರೀಕ್ಷಗೆ ಒಳಪಡಬೇಕು. ಬೇಗ ಸೋಂಕು ಇರುವು ಖಚಿತವಾದರೆ ಸುಲಭವಾಗಿ ಗುಣಪಡಿಸಲು ಸಾಧ್ಯ ಎಂದರು.
ರೋಗ ಲಕ್ಷಣಗಳಿದ್ದರೂ ಆಸ್ಪತ್ರೆಗೆ ಹೋಗದೆ ನಿರ್ಲಕ್ಷ ಮಾಡಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ ಹಾಗಾಗಿ ಎಲ್ಲರೂ ಜಾಗೃತರಾಗಿ ಸೋಂಕು ಪತ್ತೆಯಾದಲ್ಲಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಕರೆ ನೀಡಿದರು.
ಹಾಸನದ ವೈದ್ಯಕೀಯ ಸಂಘದ ಅಧ್ಯಕ್ಷರಾದ ಡಾ|| ರಮೇಶ್ ಅವರು ಮಾತನಾಡಿ ಕೋವಿಡ್ ನಿಯಂತ್ರಣಕ್ಕೆ ಸ್ವಯಂ ಜಾಗೃತಿಯೇ ದೊಡ್ಡ ಮದ್ದು. ಪ್ರತಿಯೊಬ್ಬರೂ ಎಸ್.ಎಂ.ಎಸ್ ಅಂದರೆ ಎಸ್=ಸಾಮಾಜಿಕ ಅಂತರ, ಎಂ= ಮಾಸ್ಕ್ ಕಡ್ಡಾಯವಾಗಿ ಧರಿಸುವುದು ಹಾಗೂ ಎಸ್=ಸ್ವಚ್ಚತೆ, ಸ್ಯಾನಿಟೈಸರ್ ಬಳಕೆ ಮಾಡಿದ್ದಲ್ಲಿ ಸೋಂಕಿನಿಂದ ದೂರ ಉಳಿಯಬಹುದು ಎಂದು ಹೇಳಿದರು.
ಭಾರಜತೀಯ ವೈದ್ಯಕೀಯ ಸಂಘದ ಜಿಲ್ಲಾ ವತಿಯಿಂದ ಕೋವಿಡ್-19 ನಿಯಂತ್ರಣ ಕುರಿತಂತೆ ಹಲವು ಜಾಗೃತಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ಡಿಜಿಟಲ್ ತಂತ್ರಜ್ಞಾನವನ್ನು ಬಳಸಿ ಜಾಗೃತಿ ಮೂಡಿಸಲಾಗುತ್ತಿದೆ ಇದಕ್ಕೆ ಸಂಘ, ಸಂಸ್ಥೆಗಳು, ಸ್ವಯಂ ಸೇವಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ವೈದ್ಯಕೀಯ ಆಸ್ಪತ್ರೆಗಳಲ್ಲಿ ಎಷ್ಟೇ ಚಿಕಿತ್ಸೆ ನೀಡಿದರೂ ಸಾರ್ವಜನಿಕರು ಸ್ವಯಂ ನಿಯಂತ್ರಣ ಕ್ರಮಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಅನುಸರಿಸಬೇಕು ಎಂದು ಡಾ|| ರಮೇಶ್ ಅವರು ಅಭಿಪ್ರಾಯಪಟ್ಟರು.
ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ|| ಕೃಷ್ಣ ಮೂರ್ತಿ, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್, ಭಾರತೀಯ ವೈದ್ಯಕೀಯ ಸಂಘದ ಪ್ರತಿನಿಧಿಗಳಾದ ಜನಪ್ರಿಯ ಆಸ್ಪತ್ರೆಯ ಆಸ್ಪತ್ರೆಯ ಡಾ|| ಭಶೀರ್, ಮಂಗಳ ಆಸ್ಪತ್ರೆಯ ಡಾ|| ಅಶೋಕ್ ಗೌಡ ಹಾಗೂ ಭಾರತೀಯ ವೈದ್ಯಕೀಯ ಸಂಘದ ಕಾರ್ಯದರ್ಶಿ ವಾಗೀಶ್ ಮತ್ತಿತರರು ಹಾಜರಿದ್ದರು.