ಆಲೂರು ತಾಲೂಕಿನ ಹಳ್ಳಿಯೂರು ಗ್ರಾಮದಲ್ಲಿ ಗ್ರಾಮದಲ್ಲಿ ಇಂದು ಬೆಳಗ್ಗೆ ಗಾಯಗೊಂಡಿದ್ದ ಭೀಮ ಕಾಡಾನೆಗೆ ಚಿಕಿತ್ಸೆ ನೀಡುವ ಸಲುವಾಗಿ ಶಾರ್ಪ್ ಶೂಟ್ ಮುಖಾಂತರ ಅರವಳಿಕೆ ನೀಡಿದ ಸಂದರ್ಭದಲ್ಲಿ ಭೀಮ ಕಾಡಾನೆ ಓಡಿಬಂದು ಶಾರ್ಪ್ ಶೂಟರ್ ವೆಂಕಟೇಶ್ ರವರ ಮೇಲೆ ದಾಳಿ ನಡೆಸಿತ್ತು.
ಗಂಭೀರವಾಗಿ ಗಾಯಗೊಂಡ ವೆಂಕಟೇಶ್ ಅವರನ್ನು ಹಾಸನದ ಸರ್ಕಾರಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ವೆಂಕಟೇಶ್ ಮೃತಪಟ್ಟಿದ್ದಾರೆ. ಕಾಡನ ದಾಳಿಗೆ ಅರಣ್ಯ ಇಲಾಖೆಯ ಸಿಬ್ಬಂದಿಯ ಮೃತಪಟ್ಟಿರುವುದು ಆತಂಕಕಾರಿ ಸಂಗತಿ ಆಗಿದೆ