ಸನ್ಮಾನ್ಯ ಶಾಸಕರಾದ ಕೆ ಎಸ್ ಲಿಂಗೇಶ್ ರವರು ಬೇಲೂರಿನ ಶ್ರೀ ಚನ್ನಕೇಶವ ಸಮುದಾಯಭವನದಲ್ಲಿ ಏರ್ಪಡಿಸಲಾಗಿದ್ದ ಮಹಿಳಾ ಮತ್ತು ಮಕ್ಕಳ ಆಭಿವೃದ್ದಿ ಇಲಾಖೆ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಪೋಷಣ್ ಅಭಿಯಾನದ ಯೋಜನೆಯಡಿ ಮೊಬೈಲ್ ಪೋನ್ ವಿತರಿಸಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ಇಂದಿರಾರವಿಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಎಲ್ಲಾ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.