ಶ್ರವಣದೋಷವುಳ್ಳ ವಿಕಲಚೇತನರಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರವನ್ನು ಉಚಿತ ನೀಡಲಾಗುವುದು (ಹೆಚ್ಚಿನ ಮಾಹಿತಿ)
ಹಾಸನ : (ಹಾಸನ್_ನ್ಯೂಸ್) !, (ಜ.2) ☑ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆವತಿಯಿಂದ ಶ್ರವಣದೋಷವುಳ್ಳ ವಿಕಲಚೇತನರಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರವನ್ನು ಉಚಿತವಾಗಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಶ್ರವಣದೋಷವುಳ್ಳ ವ್ಯಕ್ತಿಯು ಭಾರತದ ಪ್ರಜೆಯಾಗಿರಬೇಕು ಹಾಗೂ ಕರ್ನಾಟಕದಲ್ಲಿ ಕನಿಷ್ಟ ಹಿಂದಿನ 10 ವರ್ಷಗಳ ನಿವಾಸಿಯಾಗಿರಬೇಕು. ಕನಿಷ್ಠ ಎಸ್.ಎಸ್.ಎಲ್.ಸಿ ವರೆಗೆ ವ್ಯಾಸಂಗ ಮಾಡಿರಬೇಕು ಹಾಗೂ ವೃತ್ತಿಗೆ ಸಂಬಂಧಿಸಿದಂತೆ ಪ್ರಮಾಣ ಪತ್ರ ಸಲ್ಲಿಸಬೇಕು. ಯೋಜನೆಯ ಸೌಲಭ್ಯ ಪಡೆಯಲು ಯಾವುದೇ ಆದಾಯ ಮಿತಿಯಿರುವುದಿಲ್ಲ.
ಈ ಯೋಜನೆಯಡಿ ಸೌಲಭ್ಯ ಪಡೆಯುವ ಶ್ರವಣದೋಷವುಳ್ಳ ಫಲಾನುಭವಿಗಳು ಬೇರೆ ಯಾವುದೇ ಮೂಲಗಳಿಂದ ಇದೇ ರೀತಿಯ ಸೌಲಭ್ಯ ಪಡೆದಿರಬಾರದು ಹಾಗೂ ಈ ಬಗ್ಗೆ ನೋಟರಿಯಿಂದ ದೃಢೀಕರಿಸಿದ ಪ್ರಮಾಣ ಪತ್ರ ಒದಗಿಸತಕ್ಕದ್ದು. ವಿಕಲಚೇತನತೆಯ ಪ್ರಮಾಣ ಶೇ.40 ಅಥವಾ ಅದಕ್ಕಿಂತ ಹೆಚ್ಚಾಗಿರತಕ್ಕದ್ದು. ಕಡ್ಟಾಯವಾಗಿ ಸಂಬಂಧಪಟ್ಟ ತಹಸೀಲ್ದಾರರಿಂದ ಪಡೆದ ವಾಸಸ್ಥಳ ದೃಢೀಕರಣ ಪತ್ರ ನೀಡಬೇಕು.
ಈ ಯೋಜನೆಯಡಿ ಜೀವಿತಾವಧಿಯಲ್ಲಿ ಒಮ್ಮೆ ಮಾತ್ರ ಸೌಲಭ್ಯ ನೀಡಲಾಗುವುದು, ಸೌಲಭ್ಯ ಪಡೆದ ನಂತರ ಬೇರೆಯವರಿಗೆ ಹಸ್ತಾಂತರಿಸಬಾರದು/ಪರೆಭಾರೆ ಮಾಡಬಾರದು ಈ ಕುರಿತು ದೃಢೀಕರಣ ನೀಡುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಜ.28 ರೊಳಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಲು ತಿಳಿಸಿದೆ.
#supporlocal #supportsmallbusiness