ಹಾಸನ ಜ.20 (ಹಾಸನ್_ನ್ಯೂಸ್) !, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 06 ಸೇವೆಗಳನ್ನು (ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್ ಪಾಸ್ ವಿಕಲಚೇತನರ ರಿಯಾಯಿತಿ ಬಸ್ಪಾಸ್, ಅಂಧರ ಉಚಿತ ಬಸ್ಪಾಸ್, ಸ್ವಾತಂತ್ರ್ಯ ಹೋರಾಟಗಾರರ ಬಸ್ಪಾಸ್, ಸ್ವಾತಂತ್ರ್ಯ ಹೋರಾಟಗಾರರ ಪತ್ನಿ/ವಿಧವಾ ಪತ್ನಿಯರ ಉಚಿತ ಕೂಪನ್ ಪಡೆಯಲು ಮತ್ತು ಅಪಘಾತ ಪರಿಹಾರ ನಿಧಿಗಾಗಿ) ಸೇವಾಸಿಂಧು ಪೋರ್ಟಲ್ನಲ್ಲಿ ಕಡ್ಡಾಯವಾಗಿ ಆನ್ಲೈನ್ ವ್ಯವಸ್ಥೆಯಡಿ ನಿರ್ವಹಿಸಲಾಗುತ್ತಿದೆ.
ವಿಕಲಚೇತನರ ರಿಯಾಯಿತಿ ದರದ ಬಸ್ ಪಾಸ್ ವಿತರಣೆ ಮಾಡಬೇಕಾಗಿರುವುದರಿಂದ ಫಲಾನುಭವಿಗಳು ನವೀಕರಿಸಿಕೊಳ್ಳಲು ಮತ್ತು ಹೊಸ ಬಸ್ಪಾಸ್ಗಳನ್ನು ಪಡೆದುಕೊಳ್ಳಲು ಸೇವಾಸಿಂದು https://serviceonline.gov.in/karnataka ನಲ್ಲಿ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ.
ಸದರಿ ವಿಕಲಚೇತನ ಫಲಾನುಭವಿಗಳು ಫೆ.28ರ ಒಳಗಾಗಿ ನವೀಕರಣ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ. ಫೆ 28ರ ನಂತರ ವಿಕಲಚೇತನರ ಬಸ್ಪಾಸ್ ನವೀಕರಣಕ್ಕೆ ಅವಕಾಶ ಇರುವುದಿಲ್ಲ. ಆನ್ಲೈನ್ನಲ್ಲಿ ಸಂಬಂಧಪಟ್ಟ ದಾಖಲೆಗಳನ್ನು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಯವರಿಂದ ದೃಢೀಕರಿಸಿದ ವಿಕಲಚೇತನರ ಗುರುತಿನ ಚೀಟಿ ಅಥವಾ
ಯು.ಜಿ.ಐ.ಡಿ.ಕಾರ್ಡ್ ಮತದಾರರ ಚೀಟಿ/ಆಧಾರ್ ಕಾರ್ಡ್/ರೇಷನ್ ಕಾರ್ಡ್, ಇತ್ತೀಚಿನ ಭಾವ ಚಿತ್ರ ಅಫ್ಲೋಡ್ ಮಾಡುವುದು ಕಡ್ಡಾಯವಾಗಿರುತ್ತದೆ.
ಫಲಾನುಭವಿಗಳು ಆನ್ಲೈನ್ ಮುಖಾಂತರ ದಾಖಲಾತಿಗಳನ್ನು ಅಪ್ಲೋಡ್ ಮಾಡಿದ್ದಾಗ್ಯೂ, ಭೌತಿಕವಾಗಿ ಬಸ್ಪಾಸ್ ಪಡೆಯಲು ಬಂದಾಗ ಅಗತ್ಯ ದಾಖಲಾತಿಗಳು ಮತ್ತು ಮೂಲ ದಾಖಲೆಗಳು ಹಾಗೂ ಜೆರಾಕ್ಸ್ ಪ್ರತಿಯನ್ನು ಹಾಜರುಪಡಿಸಿ, ವಿಕಲಚೇತನರ (ಹೊಸ/ನವೀಕರಣ) ಬಸ್ಪಾಸ್ಗಳನ್ನು ಪಡೆಯುವಂತೆ ಎಂದು ಕ.ರಾ.ರ.ಸಾ.ನಿಗಮ ಚಿಕ್ಕಮಗಳೂರು ವಿಭಾಗದ ವಿಭಾಗೀಯನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.