ಹಾಸನ ಮಾ.15 (ಹಾಸನ್_ನ್ಯೂಸ್ !, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಎಲ್ಲಾ ತಹಶೀಲ್ದಾರ್ಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದ ಅವರು ಗ್ರಾಮ ಪಂಚಾಯಿತಿ ಸಿಬ್ಬಂದಿಗಳು, ಕಂದಾಯ ಇಲಾಖೆ ಸಿಬ್ಬಂದಿಗಳು ಹಾಗೂ ಆರೊಗ್ಯ ಕಾರ್ಯಕರ್ತೆಯರು ಆದಷ್ಟು ಬೇಗ ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದು ಹೇಳಿದರು.
ಮಹಾರಾಷ್ಟ್ರ, ಕೇರಳ ರಾಜ್ಯಗಳಿಂದ ಜಿಲ್ಲೆಗೆ ಬರುವವರನ್ನು ಪತ್ತೆ ಮಾಡಿ ಕೋರೊನ ನೆಗೆಟಿವ್ ವರದಿಯನ್ನು ಪಡೆಯಿರಿ ಎಂದರಲ್ಲದೆ ಕೋವಿಡ್ ಪ್ರಕರಣ ಸಂಖ್ಯೆ ದಿನವು ಏರಿಕೆಯಾಗುತ್ತಿದ್ದು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಂಘ ಸಂಸ್ಥೆಗಳು ಜನರಲ್ಲಿ ಸಾಮಾಜಿಕ ಅಂತರ ಕಾಪಾಡಲು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಎಲ್ಲಾ 60 ವರ್ಷ ಮೇಲ್ಪಟ್ಟವರು ಹಾಗೂ 45 ವರ್ಷ ಮೇಲ್ಪಟ್ಟ ಬಹು ಸ್ವರೂಪದ ಆರೋಗ್ಯ ಸಮಸ್ಯೆ ಉಳ್ಳವರು ಕೋವಿಡ್ ಲಸಿಕೆ ಹಾಕಿಸಿಕೊಳ್ಳುವಂತೆ ರಸ್ತೆ ಬದಿ, ಸಂತೆಗಳು, ಜನಸಂದಣಿ ಸೇರುವ ಸ್ಥಳಗಳಲ್ಲಿ ಪೋಸ್ಟರ್ ಅಂಟಿಸಿ ಜೊತೆಗೆ ಕರಪತ್ರ ಹಂಚುವ ಮೂಲಕ ಅರಿವು ಮೂಡಿಸಿ ಎಂದು ಹೇಳಿದರು.
ಮದುವೆ ಶುಭ ಸಮಾರಂಭ, ಮನರಂಜನೆ ಸ್ಥಳಗಳು, ಸಿನಿಮಾ ಮಂದಿರಗಳಲ್ಲಿ ಹಾಗೂ ಶವಸಂಸ್ಕಾರ ನಡೆಯುವ ಸ್ಥಳಗಳಲ್ಲಿ ಹೆಚ್ಚು ಜನ ಸೇರದಂತೆ ನಿಗಾವಹಿಸಿ ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ರೈತ ಸಂಪರ್ಕ ಕೇಂದ್ರಗಳಿಂದ ಮಾಹಿತಿಯನ್ನು ಪಡೆದು ಫ್ರೂಟ್ಸ್ ಐ.ಡಿ ಪಡೆದಿಲ್ಲದಂತಹ ರೈತರಿಗೆ ಮಾಹಿತಿ ನೀಡಿ ನೋಂದಣಿ ಮಾಡಲು ಎಲ್ಲಾ ತಾಲ್ಲೂಕಿನ ತಹಸೀಲ್ದಾರರು, ಗ್ರಾಮ ಲೆಕ್ಕಿಗರು ಹಾಗೂ ಗ್ರಾಮ ಸಹಾಯಕರು ಹೆಚ್ಚಿನ ಸಹಕಾರ ನಿಡುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಪ್ರತಿ ಗ್ರಾಮದಲ್ಲೂ ಸ್ಮಶಾನಕ್ಕೆ ಸ್ಥಳವಕಾಶ ನೀಡಬೇಕಾಗಿದ್ದು, ಸ್ಮಶಾನ ಇಲ್ಲದ ಗ್ರಾಮಗಳಿಗೆ ಆದಷ್ಟು ಬೇಗ ಭೂಮಿಯನ್ನು ಒದಗಿಸಿ ಎಂದು ಜಿಲ್ಲಾಧಿಕಾರಿ ಹೇಳಿದರು.
ಕುಟುಂಬ ಸಾಫ್ಟ್ವೇರ್ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ ಅವರು ಈಗಾಗಲೇ ಮರಣ ಹೊಂದಿರುವಂತವರ ಹೆಸರನ್ನು ರೇಷನ್ ಕಾರ್ಡ್ನಿಂದ ತೆಗೆಯಲು ಆಧಾರ್ ಕಾರ್ಡ್, ರೇಷನ್ ಕಾರ್ಡ್ ಹಾಗೂ ಇತರೆ ದಾಖಲಾತಿಗಳನ್ನು ಪಡೆದುಕೊಳ್ಳಿ ಎಂದು ಅವರು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಣಾಧಿಕಾರಿ ಬಿ.ಎ ಪರಮೇಶ್, ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಂ, ಉಪ ವಿಭಾಗಾಧಿಕಾರಿ ಬಿ.ಎ ಜಗದೀಶ್, ಜಂಟಿ ಕೃಷಿ ನಿರ್ದೇಶಕರಾದ ರವಿ, ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ರೇವತಿ ಸುಧಾಕರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ|| ಸತೀಶ್ ಮಹಿಳಾ ,ಮತ್ತು ಮಕ್ಕಳ ಕಲ್ಯಾಣ ಉಪನಿರ್ದೇಶಕರಾದ ದಿಲೀಪ್, ತಹಶೀಲ್ದಾರ್ ಶಿವಶಂಕರಪ್ಪ ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು.