ಹಾಸನ.ಮಾ.23(ಹಾಸನ್_ನ್ಯೂಸ್ !, ಜಿಲ್ಲೆಯಲ್ಲಿಂದು ಹೊಸದಾಗಿ 35 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 29073 ಏರಿಕೆಯಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ 223 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಈವರೆಗೆ 28,381 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 7 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 469 ಮಂದಿ ಸಾವನ್ನಪ್ಪಿದ್ದಾರೆ.
ಇಂದು ಪತ್ತೆಯಾದ 35 ಕೋವಿಡ್ ಪ್ರಕರಣಗಳಲ್ಲಿ ಹಾಸನ ತಾಲ್ಲೂಕಿನಲ್ಲಿ 15 ಮಂದಿ, ಆಲೂರು ತಾಲ್ಲೂಕು 7 ಮಂದಿ, ಹೊಳೆನರಸೀಪುರ 5 ಮಂದಿ, ಸಕಲೇಶಪುರ ತಾಲ್ಲೂಕಿನಲ್ಲಿ 5 ಮಂದಿ, ಅರಸೀಕೆರೆ, ಅರಕಲಗೂಡು, ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ತಲಾ ಒಬ್ಬರಿಗೆ ಕೋವಿಡ್ ಪ್ರಕರಣ ದೃಡಪಟ್ಟಿದೆ. -ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್