ನಗರದ ಪತ್ರಕರ್ತರ ಭವನದಲ್ಲಿಂದು ಮಾದ್ಯಮ ಪ್ರತಿನಿಧಿಗಳಿಗೆ ಕೋವಿಡ್ ಶಿಲ್ಡ್ ಲಸಿಕೆಯನ್ನು ಹಾಕಲಾಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್, ಆರ್.ಸಿ.ಹೆಚ್ ಅಧಿಕಾರಿ ಡಾ|| ಕಾಮತರಾಜ್, ತಾಲ್ಲೂಕು ಆರೋಗ್ಯಧಿಕಾರಿ ಡಾ|| ವಿಜಯ್, ಜಿಲ್ಲಾ ವಾರ್ತಾಧಿಕಾರಿ ವಿನೋದ್ ಚಂದ್ರ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾ ಧ್ಯಕ್ಷರಾದ ಶಿವಾನಂದ ತಗಡೂರು, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಪ್ರಸನ್ನ ಕುಮಾರ್, ಜಿಲ್ಲಾ ಹಾಗೂ ಪ್ರಾದೇಶಿಕ ಪತ್ರಿಕೆಗಳ ಸಂಪಾದಕರ ಸಂಘದ ಅಧ್ಯಕ್ಷರಾದ ಜೆ. ಆರ್ ಕೆಂಚೇಗೌಡ, ಏಷ್ಯಾ ಕಾರ್ಯನಿರತ ಪತ್ರಕರ್ತರ ಸಂಘದ ಸಂಚಾಲಕರಾದ ಹೆಚ್.ಬಿ ಮದನ್ ಗೌಡ, ಹಾಗೂ ಮತ್ತಿತರರು ಹಾಜರಿದ್ದರು.