ರಸ್ತೆ ಅಪಘಾತ ; ಮೃತ ಟೈಲರ್ ಪತ್ನಿ, ಒಂದು ಗಂಡು ಒಂದು ಹೆಣ್ಣು ಮಕ್ಕಳಿದ್ದು ಸಂಕಷ್ಟಕ್ಕೆ ಸಿಲುಕಿದ್ದಾರೆ

0

ಹಾಸನ :  ಲಾರಿ ಮತ್ತು‌ ಬೈಕ್‌ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಮಾವನೂರು ಬಳಿ ಗುರುವಾರ ಬೆಳಿಗ್ಗೆ ನಡೆದಿದೆ. , ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹೊಸೂರು ಗ್ರಾಮದ ನಿವಾಸಿ ಗೋಪಾಲೇಗೌಡ (60) ಸ್ಥಳದಲ್ಲೇ ಮೃತಪಟ್ಟ ವ್ಯಕ್ತಿ ಎಂದು ತಿಳಿದು ಬಂದಿದೆ. , ಟೈಲರ್  ಕೆಲಸ ಮಾಡಿಕೊಂಡಿದ್ದ ಗೋಪಾಲೇಗೌಡ.

ಗುರುವಾರ ಬೆಳಿಗ್ಗೆ ಹಾಸನಕ್ಕೆ  ಹೋಗುತ್ತಿದ್ದಾಗ ಹಾಸನ ಕಡೆಯಿಂದ ಬಂದ ಲಾರಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಿಂದಾಗಿ ಬೈಕ್ ನುಜ್ಜುಗುಜ್ಜಾಗಿದೆ ಲಾರಿ ಚಾಲಕ ಲಾರಿಯನ್ನು ಬಿಟ್ಟು ಅಪಘಾತ ಸ್ಥಳದಿಂದ ಪರಾರಿಯಾಗಿದ್ದಾನೆ. , ಮೃತ ಗೋಪಾಲೇಗೌಡಗೆ ಪತ್ನಿ, ಒಂದು ಗಂಡು ಒಂದು ಹೆಣ್ಣು ಮಕ್ಕಳಿದ್ದಾರೆ. , ಸ್ಥಳಕ್ಕೆ

ಆಲೂರು ಪೊಲೀಸ್ ಠಾಣೆಯ ಪಿಎಸ್ಐ ಅನಂತರಾಮು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಲಾರಿಯನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಆಲೂರು ಪೊಲೀಸ್‌ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here