ಹಾಸನ / ಅರಸೀಕೆರೆ : ಸಾರಿಗೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟಿರುವ ಘಟನೆ ನಗರದ ಬಸ್ ನಿಲ್ದಾಣ ಬಳಿ ಶನಿವಾರ ತಡರಾತ್ರಿ ನಡೆದಿದೆ. ಮಧ್ಯರಾತ್ರಿ 1.30 ಗಂಟೆ ಸಮಯದಲ್ಲಿ ರಾಮನಗರ ಜಿಲ್ಲೆ, ಚನ್ನಪಟ್ಟಣ ತಾಲೂಕು, ಸಂತೆ ಮೊಗೇನಹಳ್ಳಿ ಗ್ರಾಮದ ಸಾಗರ್ ಎಂಬುವರು ಶಿವಮೊಗ್ಗಕ್ಕೆ ಹೋಗಲು ರಾಯಲ್ ಎನ್ ಫೀಲ್ಡ್ ಹಿಮಾಲಯನ್ ಬೈಕಿನಲ್ಲಿ ಅರಸೀಕೆರೆ ಬಸ್ ನಿಲ್ದಾಣ ಸಮೀಪದ ರಸ್ತೆಯ ಎಡಬದಿಯಲ್ಲಿ ಹೋಗುತ್ತಿದ್ದಾಗ ಶಿವಮೊಗ್ಗ ಕಡೆಯಿಂದ ಬಂದ KSRTC ಚಾಲಕ, ನಿಲ್ದಾಣದ ಕಡೆಗೆ ಹೋಗಲೆಂದು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿ ಬೈಕಿಗೆ ಗುದ್ದಿದ್ದಾರೆ ಎನ್ನಲಾಗಿದೆ .

ಡಿಕ್ಕಿ ರಭಸಕ್ಕೆ ಸಾಗರ್ ಗಂಭೀರ ಗಾಯಗೊಂಡು. ಕೂಡಲೇ ಅರಸೀಕೆರೆ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಸೇರಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಹಾಸನಾಂಬ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅಲ್ಲಿಂದ ಆಂಬ್ಯುಲೆನ್ಸ್ನಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದಾಗ, ಮಾರ್ಗಮಧ್ಯೆ ಕುಣಿಗಲ್ ಗೇಟ್ ಹತ್ತಿರ ಭಾನುವಾರ ಬೆಳಗ್ಗೆ 11.56AM ಗಂಟೆಗೆ ಸುಮಾರಿಗೆ ಮೃತಪಟ್ಟಿದ್ದಾರೆ. ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.