ಇಂದು ಮುಂಜಾನೆ ಹಾಸನದಿಂದ ಕೇರಳದ ಶಬರಿಮಲೆ ದೇವಸ್ಥಾನಕ್ಕೆ ತೆರಳುತ್ತಿದ್ದ ಟೆಂಪೋಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಯಾತ್ರಾರ್ಥಿಗಳು ಸ್ಥಳದಲ್ಲೇ ಸಾವು

0

ಭೀಕರ ಅಪಘಾತ: ಹಾಸನದಿಂದ ಶಬರಿಮಲೆಗೆ ತೆರಳುತ್ತಿದ್ದ ಟೆಂಪೋಗೆ ಲಾರಿ ಡಿಕ್ಕಿ: ಮೂವರು ಯಾತ್ರಾರ್ಥಿಗಳ ದುರ್ಮರಣ

ಹಾಸನ: ಇಂದು ಮುಂಜಾನೆ ಹಾಸನದಿಂದ ಕೇರಳದ ಶಬರಿಮಲೆ ದೇವಸ್ಥಾನಕ್ಕೆ ತೆರಳುತ್ತಿದ್ದ ಟೆಂಪೋಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಯಾತ್ರಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ ಹಾಸನದಿಂದ ಶಬರಿಮಲೆ ದೇವಸ್ಥಾನಕ್ಕೆ 14 ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟೆಂಪೋ ಟ್ರಾವೆಲರ್ ಎನ್‌ಎಚ್ ಬೈಪಾಸ್‌ನಲ್ಲಿ ಕೋಝಿಕ್ಕೋಡ್‌ನ ಪೂಲದಿಕ್ಕಿನ್ನು ಎಂಬಲ್ಲಿ ಕಂಟೈನರ್ ಲಾರಿಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಮೂವರು ಯಾತ್ರಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಕೋಝಿಕ್ಕೋಡ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ ಮೂಲಗಳ ಪ್ರಕಾರ ಮೃತರನ್ನು ದಿನೇಶ್, ಶಿವಣ್ಣ ಮತ್ತು ನಾಗರಾಜ್ ಎಂದು ಗುರುತಿಸಲಾಗಿದೆ.

LEAVE A REPLY

Please enter your comment!
Please enter your name here