bangaloreans died in accident near hassan

0

ಕಂಟೇನರ್‌ಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ- ಚನ್ನರಾಯಪಟ್ಟಣ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಡೆದಿದೆ.

ಹಾಸನ: ಕಂಟೈನರ್ ಲಾರಿಗೆ ಹಿಂಬದಿಯಿಂದ ಕಾರ್ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ಬೆಂಗಳೂರು ಮೂಲದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಜುನಾಥ್, ಚೇತನ್, ವಿಕ್ರಂ, ಅಭಿಷೇಕ್ ಮೃತ ದುರ್ದೈವಿಗಳಾಗಿದ್ದಾರೆ.

Advertisements

ಬೆಂಗಳೂರಿನಿಂದ ಚಿಕ್ಕಮಗಳೂರಿನ ಕಾರ್ಯಕ್ರಮವೊಂದಕ್ಕೆ ಸ್ನೇಹಿತರು ತೆರಳುತ್ತಿದ್ದರು. ಮಂಗಳೂರಿನತ್ತ ಹೊರಟಿದ್ದ ಕಂಟೇನರ್‌ಗೆ ಹಿಂಬದಿಯಿಂದ ಕಾರ್ ಡಿಕ್ಕಿ ಹೊಡೆದ ಪರಿಣಾಮದಿಂದಾಗಿ ಈ ಅವಘಡ ಸಂಭವಿಸಿದೆ. ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

LEAVE A REPLY

Please enter your comment!
Please enter your name here