Arsikere

ಹಾಸನ: ಭೀಕರ ಅಪಘಾತಕ್ಕೆ 9 ಸಾವು . KSRTC , ಟ್ಯಾಂಕರ್, ಟಿಟಿ ನಡುವೆ ಸರಣಿ ಅಪಘಾತ

By

October 16, 2022

ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಬಾಣವಾರ ಹೋಬಳಿ ಗಾಂಧಿ ನಗರ ಗ್ರಾಮದ ಬಳಿ ತಡರಾತ್ರಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, 5 ಮಕ್ಕಳು ಸೇರಿದಂತೆ 9 ಜನರು

ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಷ್ಟ್ರೀಯ ಹೆದ್ದಾರಿ 69 ರಲ್ಲಿ ಕೆಎಸ್ಆರ್ಟಿ ಬಸ್, ಟಿಟಿ ವಾಹನ ಹಾಗೂ ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಪರಿಣಾಮ ಟೆಂಪೋ ಟ್ರಾವೆಲರ್ನಲ್ಲಿದ್ದ 5 ಮಕ್ಕಳು ಸೇರಿದಂತೆ ಒಟ್ಟು 9 ಜನರು ಸಾವನ್ನಪ್ಪಿದ್ದಾರೆ. ಒಟ್ಟು ಟಿಟಿ ವಾಹನದಲ್ಲಿ 14 ಮಂದಿ ಧರ್ಮಸ್ಥಳಕ್ಕೆ ತೆರಳಿದ್ದರು. ಅಲ್ಲಿಂದ ವಾಪಸ್ ಬರುತ್ತಿದ್ದ ವೇಳೆ

ಅಪಘಾತ ಸಂಭವಿಸಿದೆ. ಲಾರಿ ಬಸ್ ಮಧ್ಯೆ ಸಿಲುಕಿ ಟಿಟಿ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಇನ್ನು ಘಟನೆಯಲ್ಲಿ ಗಾಯಗೊಂಡಿರುವವರನ್ನು ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಬಾಣಾವರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಾಲ್ವರು ಮಕ್ಕಳು ಸೇರಿ ಸ್ಥಳದಲ್ಲೇ 9 ಮಂದಿ ಸಾವನಪ್ಪಿದ್ದು, 33 ವರ್ಷದ ಚೈತ್ರಾ,

10 ವರ್ಷದ ಸಮಂತಾ, 12 ವರ್ಷದ ಡಿಂಪಿ, 2 ವರ್ಷದ ಧ್ರುವ, 10 ವರ್ಷದ ತನ್ಮಯ, 20 ವರ್ಷದ ವಂದನಾ, 55 ವರ್ಷದ ಲೀಲಾವತಿ, 60 ವರ್ಷದ ದೊಡ್ಡಯ್ಯ, 50 ವರ್ಷದ ಭಾರತಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ