ಸಕಲೇಶಪುರ: ಮಂಗಳೂರು ಕಡೆಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಟ್ಯಾಂಕರ್ ವೊಂದು ಸಕಲೇಶಪುರದ ಕಡೆಗೆ ಬರುತ್ತಿದ್ದ ಸ್ಕಾರ್ಪಿಯೋ ಕಾರೊಂದನ್ನು ಡಿಕ್ಕಿ ಹೊಡೆದಿದೆ ಟ್ಯಾಂಕರ್ ಚಾಲಕನ ಸಮಯ ಪ್ರಜ್ಞೆಯಿಂದ ದೊಡ್ಡ ಅವಘಡ ತಪ್ಪಿದೆ.

ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 75 ಗುರುದೇವ್ ಪೆಟ್ರೋಲ್ ಬಂಕ್ ಸಮೀಪ ಈ ಘಟನೆ ನಡೆದಿದ್ದು ಅದೃಷ್ಟ ವಷಾತ್ ಯಾವುದೇ ಹೆಚ್ಚಿನ ಅಪಾಯ ಸಂಭವಿಸಿಲ್ಲ. ಟ್ಯಾಂಕರ್ ರಸ್ತೆ ಬದಿಯಲ್ಲಿ ಬಿದ್ದಿದೆ. ಸ್ಕಾರ್ಪಿಯೋ ಚಾಲಕ ಹಾಗೂ





ಟ್ಯಾಂಕರ್ ಚಾಲಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಕ್ರಾಫರ್ಡ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಟ್ಯಾಂಕರ್ ಗ್ಯಾಸ್ ಲೀಕ್ ಆಗುತ್ತಿರುವ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.