KSRTC ಬಸ್ ಗದ್ದೆಗೆ ಪಲ್ಟಿ ಚಾಲಕ ಸೇರಿ 32 ಜನರಿಗೆ ಗಾಯ

0

ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಒಂದು ಗದ್ದೆಗೆ ಪಲ್ಟಿ ಹೊಡೆದು ಚಾಲಕ ಸೇರಿದಂತೆ 32 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಮಂಡ್ಯ ಜಿಲ್ಲೆಯ ಕೆಆರ್‌ ಪೇಟೆ ತಾಲೂಕಿನಲ್ಲಿ ನಡೆದಿದೆ.

ತಾಲ್ಲೂಕಿನ ಮುರುಕನಹಳ್ಳಿ ಗ್ರಾಮದ ಬಳಿ ಚನ್ನರಾಯಪಟ್ಟಣ-ಮೈಸೂರು ಹೆದ್ದಾರಿಯಲ್ಲಿ ನಡೆದಿದ್ದು, ಇಂದು ಮುಂಜಾನೆ ಐದು ಗಂಟೆಗೆ ಕೆ.ಅರ್.ಪೇಟೆಯಿಂದ ಮೈಸೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿಸಿ.ಬಸ್ ಮುರುಕನಹಳ್ಳಿ ಸೇತುವೆ ಬಳಿ ಉರುಳಿಬಿದ್ದಿದೆ.

ಗದಗದಿಂದ ಮೈಸೂರಿಗೆ ಹೋಗುತ್ತಿದ್ದ ಬಸ್ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ನಂತರ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದ್ದು, ಪಕ್ಕದ ಗದ್ದೆಗೆ ಉರುಳಿದೆ.

ಪರಿಣಾಮ ಬಸ್ನಲ್ಲಿದ್ದ 32 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಗಾಯಗೊಂಡವರಿಗೆ ಕೆಆರ್ ಪೇಟೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here