Hassan

ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ

By Hassana News

September 21, 2020

ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿರುವ ಮಕ್ಕಳಿಗೆ ಜಿಲ್ಲಾ ಮಟ್ಟದಲ್ಲಿ ರೂ.10,000ಗಳ ನಗದು ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು.ನಾವೀನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ ಮತ್ತು ಕಲೆ, ಸಾಂಸ್ಕøತಿಕ, ಸಂಗೀತ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ ಕುರಿತು 7 ಆಯ್ಕೆ ಕ್ಷೇತ್ರಗಳನ್ನು ಮಾರ್ಪಡಿಸಿ ಕಲೆ, ಸಾಂಸ್ಕತಿಕ, ಸಂಗೀತ, 3 ಕ್ಷೇತ್ರಗಳನ್ನು ವಿಲೀನಗೊಳಿಸಿ ಒಂದು ಕ್ಷೇತ್ರವೆಂದು ಪರಿಗಣಿಸಿರುತ್ತಾರೆ. ಆಯ್ಕೆ ಸಮಿತಿಯ ನಿರ್ಧಾರದ ಪ್ರಕಾರ ಮಾನ್ಯತೆಗೆ ಯೋಗ್ಯವಾದ ಸಾಧನೆಯನ್ನು ಮಾಡಿರುವಂತಹ ಮಕ್ಕಳಿಗೆ ಮತ್ತು ಮೇಲ್ಕಂಡ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆಯನ್ನು ಮಾಡಿರುವ 5 ರಿಂದ 18 ವರ್ಷದೊಳಗಿನ ಮಕ್ಕಳನ್ನು ಆಯ್ಕೆ ಮಾಡಲಾಗುವುದು. ಹಿಂದಿನ ವರ್ಷಗಳಲ್ಲಿ ಆಯ್ಕೆಯಾಗಿರುವ ಮಕ್ಕಳನ್ನು ಹೊರತುಪಡಿಸಿ ಪ್ರಶಸ್ತಿಗೆ ಆಯ್ಕೆಯಾಗುವಂತಹ ಮಕ್ಕಳು ಅಪ್ರತಿಮ ಪ್ರತಿಭೆಯುಳ್ಳವರಾಗಿರಬೇಕು. ಅಸಾಧಾರಣ ಸಾಧನೆಯನ್ನು ಸಮರ್ಥಿಸಲು ಪೂರಕ ದಾಖಲಾತಿಗಳನ್ನು ಒದಗಿಸುವುದು. ಮಕ್ಕಳ ವಯಸ್ಸಿನ ಪ್ರಮಾಣ ಪತ್ರವನ್ನು ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸಬೇಕು.

2020-21ನೇ ವರ್ಷದ ಪ್ರಶಸ್ತಿಗೆ ನಿಗದಿಪಡಿಸಿದ ಅರ್ಜಿ ನಮೂನೆಗಳನ್ನು ಸಂಬಂಧಿಸಿದ ಜಿಲ್ಲೆಯ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಾಸನ ಇಲ್ಲಿಂದ ಪಡೆದು, ದ್ವಿಪ್ರತಿಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಅ.21ರೊಳಗೆ ತಲುಪುವಂತೆ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಾಸನ ಕಚೇರಿಗೆ ಸಲ್ಲಿಸತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08172267218ನ್ನು ಸಂಪರ್ಕಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.