ಹಾಸನದ ಶಿವನಂಜೇಗೌಡರಿಗೆ ಜಾನಪದ ಲೋಕ ಪ್ರಶಸ್ತಿ

0

ಹಾಸನ: ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ 2023 ನೇ ಸಾಲಿನ’ ದೊಡ್ಡ ಆಲದಹಳ್ಳಿ ಗೌರಮ್ಮ ಕೆಂಪೇಗೌಡ- ಜಾನಪದ ಲೋಕ’ ಪ್ರಶಸ್ತಿಗೆ ನಿವೃತ್ತ ಪೊಲೀಸ್ ಅಧಿಕಾರಿ ಹಾಗೂ ಹಿರಿಯ ತತ್ವಪದ ಕಲಾವಿದ ಜಿ.ಪಿ.ಶಿವನಂಜೇಗೌಡ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು ಹತ್ತು ಸಾವಿರ ರೂ.ನಗದು, ಪ್ರಶಸ್ತಿ ಪತ್ರ ಹಾಗೂ

ನೆನಪಿನ ಕಾಣಿಕೆ ಒಳಗೊಂಡಿರುತ್ತದೆ. ಮಾ.5 ರಂದು ರಾಮನಗರದ ಬಳಿ ಇರುವ ಜಾನಪದ ಲೋಕದಲ್ಲಿ ಆಯೋಜಿಸಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪರಿಷತ್ತಿನ ಜಿಲ್ಲಾಧ್ಯಕ್ಷ ಡಾ.ಹಂಪನಹಳ್ಳಿ ತಿಮ್ಮೇಗೌಡ ತಿಳಿಸಿದ್ದು, ಅಭಿನಂದನೆ ಸಲ್ಲಿಸಿದ್ದಾರೆ.
ಪ್ರಶಸ್ತಿ ಪುರಸ್ಕೃತ ಶಿವನಂಜೇಗೌಡ ಅವರು ತಾಲೂಕು ಜಾನಪದ ಪರಿಷತ್ತಿನ ಗೌರವಾಧ್ಯಕ್ಷರಾಗಿದ್ದು, ಅವರು

ಪ್ರಶಸ್ತಿಗೆ ಭಾಜನರಾಗಿರುವುದು ಪರಿಷತ್ತಿಗೆ ಹೆಮ್ಮೆಯ ಸಂಗತಿ ಎಂದು ಕಸಾಪ ತಾಲೂಕು ಅಧ್ಯಕ್ಷ ಲಕ್ಷ್ಮ ಣ್ ತಟ್ಟೆಕೆರೆ ಹರ್ಷ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here