ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರಶಸ್ತಿಗೆ ಭಾಜನರಾದ ಮುಖ್ಯಪೇದೆ ಹಾಸನದ ಹೀರಾಸಿಂಗ್

0

ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರಶಸ್ತಿಗೆ ಭಾಜನರಾದ ಮುಖ್ಯಪೇದೆ ಹೀರಾಸಿಂಗ್

ಅರಸೀಕೆರೆ : ನಗರ ಪೊಲೀಸ್ ಠಾಣೆ ಸೇರಿದಂತೆ ಜಿಲ್ಲೆಯ ನಾನಾ ಠಾಣೆಗಳಲ್ಲಿ ಆರಕ್ಷಕರಾಗಿ ಸೇವೆ ಸಲ್ಲಿಸಿ ಪ್ರಸ್ತುತ ಅರಸೀಕೆರೆ ಗ್ರಾಮಾಂತರ ಠಾಣೆಯ ಮುಖ್ಯ ಪೇದೆಯಾಗಿರುವ ಹೀರಾಸಿಂಗ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿದ್ದು ಡಿವೈಎಸ್ ಪಿ ಅಶೋಕ್, ಗ್ರಾಮಾಂತರ ಠಾಣೆಯ ವೃತ್ತನಿರೀಕ್ಷಕ ವಸಂತ್‌ ಕುಮಾರ್‌ ಸೇರಿದಂತೆ ಇಲಾಖೆಯ ಹಿರಿಯ ಕಿರಿಯ ಸಹ ಸಿಬ್ಬಂದಿಗಳು ಶುಭಹಾರೈಸಿದ್ದಾರೆ.

ತಾಲೂಕಿನವರ ಆಗಿರುವ ಹೀರಾಸಿಂಗ್ ಅವರ ಸಾಧನೆಗೆ ಶಾಸಕ ಕೆ.ಎಂ ಶಿವಲಿಂಗೇಗೌಡ ಸೇರಿದಂತೆ ನಾನಾ ರಾಜಕೀಯ ಪಕ್ಷಗಳ ಮುಖಂಡರು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ತಾಲೂಕಿಗೆ ಕೀರ್ತಿ ತಂದ ಹಿರಾಸಿಂಗ್ ಕುರಿತು ಮೆಚ್ಚುಗೆ ಮಾತುಗಳಲ್ಲಿರುವ ಮೂಲಕ ಶುಭಕೋರಿದ್ದಾರೆ.

ಮುಖ್ಯಮಂತ್ರಿಗಳ ಚಿನ್ನದ ಪದಕ ಪುರಸ್ಕೃತ ಸುದ್ದಿಗಾರರೊಂದಿಗೆ ಮಾತನಾಡಿ ಬೇಲೂರು ಚೆನ್ನರಾಯಪಟ್ಟಣ,ಬಾಣಾವರ, ಸೇರಿದಂತೆ ನಗರ ಹಾಗೂ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ವೇಳೆ ಹಿರಿಯ ಅಧಿಕಾರಿಗಳ ಮಾರ್ಗದರ್ಶನ ಮತ್ತು ಸಹ ಸಿಬ್ಬಂದಿಗಳ ಒಡಗೂಡಿ ನಾನಾ ರೀತಿಯ ಅಪರಾಧ ಪ್ರಕರಣಗಳನ್ನು ಬೇಧಿಸಿದ ಸನ್ನಿವೇಶಗಳನ್ನು ಮಾಧ್ಯಮ ಪ್ರತಿನಿಧಿಗಳ ಮುಂದೆ ಹಂಚಿಕೊಂಡರು.

ವೃತ್ತಿಬದುಕಿನ ನನ್ನ ಸೇವೆಯನ್ನು ಗುರುತಿಸಿ ಸರ್ಕಾರ ಮುಖ್ಯಮಂತ್ರಿಗಳ

ಚಿನ್ನದ ಪದಕವನ್ನು ನೀಡುತ್ತಿರುವುದಕ್ಕೆ ಅಪಾರ ಸಂತಸವಾಗುತ್ತಿದೆ ಎಂದು ಹರುಷವ್ಯಕ್ತಪಡಿಸಿದರು.

ಗ್ರಾಮಂತರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ವಸಂತ್‌ ಕುಮಾರ್‌ ಪ್ರತಿಕ್ರಿಯಿಸಿ ಸಿಂಗ ಹೀರಾಸಿಂಗ್ ಶಿಸ್ತು ಸಂಯಮದ ಜತೆಗೆ ಠಾಣೆಗೆ ಬರುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ಅವರ ಸಮಸ್ಯೆಗಳನ್ನು ಆಲಿಸುವ ಮನಸ್ಥಿತಿ ಹೊಂದಿರುವ ಸಿಬ್ಬಂದಿ ಅಲ್ಲದೆ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಂತೆ ನಾನಾ ಆಪರಾಧ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಪ್ರಮುಖ ವಹಿಸಿದ್ದಾರೆ. ಇವರು ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾಗಿರುವುದು ವೈಯಕ್ತಿಕವಾಗಿ ನನಗೂ ಸಂತಸ ತಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here