ಸನ್ಮಾನ್ಯ ಶ್ರೀ ಪ್ರಧಾನ ಮಂತ್ರಿ ಅವರು ಮೊದಲ ಹಂತದ ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿಯಲ್ಲಿ ದೇಶದಾದ್ಯಂತ 508 ರೈಲ್ವೆ ನಿಲ್ದಾಣಗಳಿಗೆ ವಿಡಿಯೋ ಕಾನ್ಸರೆನ್ಸ್ ಮೂಲಕ ಶಿಲಾನ್ಯಾಸ ಮಾಡಲಿದ್ದಾರೆ. ಇವುಗಳಲ್ಲಿ ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ 6 ಮತ್ತು ಮೈಸೂರು ವಿಭಾಗದ 2 ನಿಲ್ದಾಣಗಳು ಸೇರಿವೆ, ಹುಬ್ಬಳ್ಳಿ ವಿಭಾಗದ – ಅಳ್ಳಾವರ, ಘಟಪ್ರಭಾ, ಗೋಕಾಕ್ ರೋಡ್, ಗದಗ, ಕೊಪ್ಪಳ ಮತ್ತು ಬಳ್ಳಾರಿ ಹಾಗೂ ಮೈಸೂರು ವಿಭಾಗದ – ಅರಸೀಕೆರೆ ಮತ್ತು ಹರಿಹರ ರೈಲು ನಿಲ್ದಾಣಗಳಾಗಿವೆ.,
2023ರ ಬಜೆಟ್‌ನಲ್ಲಿ ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿಯಲ್ಲಿ ದೇಶದಾದ್ಯಂತ 1,275 ನಿಲ್ದಾಣಗಳನ್ನು ಪುನರಾಭಿವೃದ್ಧಿಗೊಳಿಸಲಾಗುವುದು ಎಂದು ಘೋಷಿಸಲಾಗಿತ್ತು, ಈ ಯೋಜನೆಯಡಿ ಕರ್ನಾಟಕದಲ್ಲಿ 55 ನಿಲ್ದಾಣಗಳನ್ನು ಪುನರಾಭಿವೃದ್ಧಿ ಮಾಡಲು ಯೋಜಿಸಲಾಗಿದೆ.
ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿಯಲ್ಲಿ ಮಾಸ್ಟರ್ ಪ್ಲಾನ್ ಸಿದ್ಧಪಡಿಸಿ ರೈಲ್ವೆ ನಿಲ್ದಾಣದ ನಿರಂತರ ಅಭಿವೃದ್ಧಿಗೆ ನಾಂದಿ ಹಾಡುತ್ತದೆ. ನಿಲ್ದಾಣದ ಪ್ರವೇಶ ದ್ವಾರ, ಸಂಚಾರ ಪ್ರದೇಶ, ಪ್ರಯಾಣಿಕರ ವಿಶ್ರಾಂತಿ ಕೊಠಡಿ, ಶೌಚಾಲಯ, ದಿವ್ಯಾಂಗ್ ಪ್ರಯಾಣಿಕರಿಗೆ ಅನುಕೂಲವಾಗುವ ಲಿಫ್ಟ್, ಮತ್ತು ಎಸ್ಕಲೇಟರ್, ನಿಲ್ದಾಣದ ಸ್ವಚ್ಛತೆ, ಉಚಿತ ವೈ-ಫೈ, ಸ್ಥಳೀಯವಾಗಿ ತಯಾರಿಸಿದ ವಸ್ತುಗಳನ್ನು ‘ಒಂದು ನಿಲ್ದಾಣ ಒಂದು ಉತ್ಪನ್ನ’ ಮಳಿಗೆ ಮೂಲಕ ಪ್ರಯಾಣಿಕರಿಗೆ ತಲುಪಿಸುವ ವ್ಯವಸ್ಥೆ, ಎಕ್ಸಿಕ್ಯೂಟಿವ್ ಲೌಂಜ್, ರಿಟೈಲ್ ಮಳಿಗೆಗಳಿಗೆ ಸ್ಥಳ, ನಿಲ್ದಾಣದ ವಿನ್ಯಾಸ ಸೇರಿದಂತೆ ಅನೇಕ ಸೌಕರ್ಯಗಳನ್ನು ಅಳವಡಿಸಲಾಗುವುದು.
ಈ ಯೋಜನೆಯು ನಿಲ್ದಾಣದ ಕಟ್ಟಡವನ್ನು ಆಧುನಿಕ ವಾಸ್ತುವಿನ್ಯಾಸದೊಂದಿಗೆ ಸುಧಾರಣೆ, ನಿಲ್ದಾಣದ ಎರಡೂ ಬದಿಗಳನ್ನು ನಗರದೊಂದಿಗೆ ಸಂಪರ್ಕಿಸುವ ವ್ಯವಸ್ಥೆ, ಸುಸ್ಥಿರ ಮತ್ತು ಪರಿಸರಸ್ನೇಹಿ ಅಭಿವೃದ್ಧಿ, ಜೆಲ್ಲಿಕಲ್ಲು ರಹಿತ ಟ್ರ್ಯಾಕ್‌ಗಳ ನಿರ್ಮಾಣ, ‘ರೂಫ್ ಪ್ಲಾಜಾಗಳು’ ಮತ್ತು ನಿಲ್ದಾಣಗಳನ್ನು ನಗರ ಕೇಂದ್ರಗಳನ್ನಾಗಿ (ಸಿಟಿ ಸೆಂಟರ್) ರೂಪಿಸುವ ಗುರಿಯನ್ನು ಹೊಂದಿದೆ..
ಭಾರತೀಯ ರೈಲ್ವೆಯು ನಿಲ್ದಾಣಗಳ ಪುನರಾಭಿವೃದ್ಧಿಗಾಗಿ ನಾಗರಿಕರಿಂದ ಸಲಹೆಗಳನ್ನು ಆಹ್ವಾನಿಸಿದೆ. ಸಾರ್ವಜನಿಕರು
ನೇರವಾಗಿ
ಆನ್‌ಲೈನ್
https://indianrailways.gov.in/railwayboard/FeedBackForm/index.jsp ಮೂಲಕ ಮಾಹಿತಿ ನೀಡುವುದರ ಜೊತೆಗೆ ತಮ್ಮ ಅಭಿಪ್ರಾಯವನ್ನು ತಿಳಿಸಬಹುದು.
ಅನೀಶ್ ಹೆಗಡೆ
ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ
ನೈಋತ್ಯ ರೈಲ್ವೆ, ಹುಬ್ಬಳ್ಳಿ