
ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ (KSRTC) ಬಸ್ ಮನೆಗೆ ನುಗ್ಗಿದ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಆಗುಂದ ಗ್ರಾಮದಲ್ಲಿ ನಡೆದಿದೆ.ಅರಸೀಕೆರೆಯಿಂದ ಹುಳಿಯಾರಕ್ಕೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಆಗುಂದ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ್ದು, ಈ ವೇಳೆ ನಾಲೈದು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರಿಗೆ ಅರಸೀಕೆರೆಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.