ಅಪಘಾತದಿಂದ ಸಾವಿಗೀಡಾದ 9 ಮಂದಿ ಕುಟುಂಬಕ್ಕೆ ತಲಾ ₹ 2 ಲಕ್ಷ ಪರಿಹಾರ -ಕರ್ನಾಟಕ ಸಿಎಂ ಘೋಷಣೆ

0

ಅಪಘಾತದಿಂದ ಸಾವಿಗೀಡಾದ 9 ಮಂದಿ ಕುಟುಂಬಕ್ಕೆ ತಲಾ ₹ 2 ಲಕ್ಷ ಪರಿಹಾರ
ಬೆಂಗಳೂರು: ಹಾಸನದ ಅರಸೀಕೆರೆ ತಾಲ್ಲೂಕಿನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿಗೀಡಾದ ಒಂಬತ್ತು ಜನರ ಕುಟುಂಬಕ್ಕೆ ತಲಾ ₹ 2 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಅಪಘಾತದಲ್ಲಿ ಗಂಭೀರ ಗಾಯಗೊಂಡವರಿಗೆ ಅಗತ್ಯ ಚಿಕಿತ್ಸೆ ನೀಡಲು ಸ್ಥಳೀಯ ಆಡಳಿತಕ್ಕೆ ಸೂಚಿಸಲಾಗಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಶನಿವಾರ ಮಧ್ಯರಾತ್ರಿ

ಅರಸೀಕೆರೆ ತಾಲ್ಲೂಕಿನ ಬಾಣಾವರ ಬಳಿ ಶಿವಮೊಗ್ಗ-ಬೆಂಗಳೂರು ಮಾರ್ಗದ ರಸ್ತೆಯಲ್ಲಿ ಬಸ್, ಹಾಲಿನ ಟ್ಯಾಂಕರ್ ಮತ್ತು ಟೆಂಪೊ ಟ್ರಾವೆಲರ್ ನಡುವೆ ಅಪಘಾತ ಸಂಭವಿಸಿತ್ತು


ಟೆಂಪೊ ಟ್ರಾವೆಲರ್ನಲ್ಲಿ 14 ಮಂದಿ ಪ್ರಯಾಣಿಸುತ್ತಿದ್ದರು. ಈ ಪೈಕಿ 9 ಜನರು ಮೃತಪಟ್ಟಿದ್ದಾರೆ. ಉಳಿದ ಐವರ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಬಸ್ ಚಾಲಕ ಸೇರಿದಂತೆ

ಬಸ್ನಲ್ಲಿದ್ದ ಐವರಿಗೆ ಗಾಯಗಳಾಗಿವೆ. ಹಾಲಿನ ಟ್ಯಾಂಕರ್ ಚಾಲಕ ಡೈವರ್ಷನ್ ಫಲಕವನ್ನು ಗಮನಿಸಿದೇ, ತಪ್ಪು ದಾರಿಯಲ್ಲಿ ಬಂದಿದ್ದೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here