ಅಪಘಾತದಿಂದ ಸಾವಿಗೀಡಾದ 9 ಮಂದಿ ಕುಟುಂಬಕ್ಕೆ ತಲಾ ₹ 2 ಲಕ್ಷ ಪರಿಹಾರಬೆಂಗಳೂರು: ಹಾಸನದ ಅರಸೀಕೆರೆ ತಾಲ್ಲೂಕಿನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿಗೀಡಾದ ಒಂಬತ್ತು ಜನರ ಕುಟುಂಬಕ್ಕೆ ತಲಾ ₹ 2 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.ಅಪಘಾತದಲ್ಲಿ ಗಂಭೀರ ಗಾಯಗೊಂಡವರಿಗೆ ಅಗತ್ಯ ಚಿಕಿತ್ಸೆ ನೀಡಲು ಸ್ಥಳೀಯ ಆಡಳಿತಕ್ಕೆ ಸೂಚಿಸಲಾಗಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.ಶನಿವಾರ ಮಧ್ಯರಾತ್ರಿ
ಅರಸೀಕೆರೆ ತಾಲ್ಲೂಕಿನ ಬಾಣಾವರ ಬಳಿ ಶಿವಮೊಗ್ಗ-ಬೆಂಗಳೂರು ಮಾರ್ಗದ ರಸ್ತೆಯಲ್ಲಿ ಬಸ್, ಹಾಲಿನ ಟ್ಯಾಂಕರ್ ಮತ್ತು ಟೆಂಪೊ ಟ್ರಾವೆಲರ್ ನಡುವೆ ಅಪಘಾತ ಸಂಭವಿಸಿತ್ತು
ಟೆಂಪೊ ಟ್ರಾವೆಲರ್ನಲ್ಲಿ 14 ಮಂದಿ ಪ್ರಯಾಣಿಸುತ್ತಿದ್ದರು. ಈ ಪೈಕಿ 9 ಜನರು ಮೃತಪಟ್ಟಿದ್ದಾರೆ. ಉಳಿದ ಐವರ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಬಸ್ ಚಾಲಕ ಸೇರಿದಂತೆ
ಬಸ್ನಲ್ಲಿದ್ದ ಐವರಿಗೆ ಗಾಯಗಳಾಗಿವೆ. ಹಾಲಿನ ಟ್ಯಾಂಕರ್ ಚಾಲಕ ಡೈವರ್ಷನ್ ಫಲಕವನ್ನು ಗಮನಿಸಿದೇ, ತಪ್ಪು ದಾರಿಯಲ್ಲಿ ಬಂದಿದ್ದೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ.