ಅರಸೀಕೆರೆ ಕನ್ನಡ ರಾಜ್ಯೋತ್ಸವ ೨೦೨೨

0

ಕನ್ನಡಾಭಿಮಾನ ರೂಢಿಸಿಕೊಳ್ಳಲು ಕರೆ

ಅರಸೀಕೆರೆ : ನಗರದ ಜೇನುಕಲ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 67ನೇ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣ ಹಾಗೂ ವಿಜೃಂಭಣೆಯಿಂದ ರಾಷ್ಟಿಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಚರಿಸಲಾಯಿತು.
ರಾಷ್ಟçಧ್ವಜಾರೋಹಣ ನೆರವೇರಿಸಿ ಮಾತನಾಡಿದ ತಹಸೀಲ್ದಾರ್ ವಿಭಾ ವಿದ್ಯಾ ರಾಥೋಡ್, ಕನ್ನಡ ನಾಡು ನುಡಿ ಕಲೆ ಸಾಹಿತ್ಯವನ್ನು ಶ್ರೀಮಂತಗೊಳಿಸುವಲ್ಲಿ ಸರ್ಕಾರ ಎಲ್ಲಾ ರೀತಿಯ ನೆರವು ನೀಡುತ್ತಿದ್ದು, ಕನ್ನಡಿಗರಾಗಿ ಕನ್ನಡ ಅಭಿಮಾನ ರೂಢಿಸಿಕೊಂಡು ಕನ್ನಡಾಂಬೆ ಹಾಗೂ ಭಾರತಾಂಬೆ ಸೇವೆಗೆ ನಾವೆಲ್ಲರೂ ಬದ್ಧರಾಗೋಣ ಎಂದು ಕರೆ ನೀಡಿದರು.
ಕನ್ನಡ ಧ್ವಜಾರೋಹಣ ನೆರವೇರಿಸಿದ ಶಾಸಕ ಕೆ.ಎಂ.ಶಿವಲಿಂಗೇಗೌಡ ಮಾತನಾಡಿ, ಜನಸಂಖ್ಯೆ ಸೇರಿ ಜಲ ಹಾಗೂ ಖನಿಜ ಸಂಪತ್ತನ್ನು ಹೇರಳವಾಗಿ ಹೊಂದಿದ್ದರೂ, ಇವುಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವಲ್ಲಿ ಪ್ರಾಮಾಣಿಕ ಪ್ರಯತ್ನ ನಮ್ಮಿಂದ ಆಗದೇ ಇರುವುದರಿಂದ ರಾಜ್ಯದ ಅಭಿವೃದ್ಧಿಗೆ ಹಿನ್ನಡೆಯಾಗಿದೆ. ಈ ನಿಟ್ಟಿನಲ್ಲಿ ರಾಜ್ಯವನ್ನು ಮುನ್ನಡೆಸುವ ಪ್ರಭುದ್ಧರು ಪಕ್ಷ ಬೇಧ ಮರೆತು ಸಂಕಲ್ಪ ಮಾಡಬೇಕಿದೆ ಎಂದರು.
ಸಮಾರಂಭದಲ್ಲಿ ನಗರಸಭೆ ಅಧ್ಯಕ್ಷ ಗಿರೀಶ್, ರಾಜ್ಯ ಹೆದ್ದಾರಿ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಜಿವಿಟಿ ಬಸವರಾಜ್‌ಮ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎನ್ ಪ್ರಸನ್ನ ಕುಮಾರ್, ಡಿವೈಎಸ್‌ಪಿ ಅಶೋಕ್, ನಗರಸಭೆ ಉಪಾಧ್ಯಕ್ಷ ಕಾಂತೇಶ್. ತಾಪಂ ಇಒ ನಾಗರಾಜ್, ಬಿಇಒ ಮೋಹನ್ ಕುಮಾರ್, ಕಸಾಪ ತಾಲೂಕು ಅಧ್ಯಕ್ಷ ಚಂದ್ರಶೇಖರ್ ಬಾಬು, ಇನ್ಸ್ ಪೆಕ್ಟರ್ ಸೋಮೇಗೌಡ ಇದ್ದರು.
ಇದೇ ವೇಳೆ ನಾನಾ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಸನ್ಮಾನಿಸಲಾಯಿತು.

LEAVE A REPLY

Please enter your comment!
Please enter your name here