ಹಾಸನ ಜಿಲ್ಲೆಯಲ್ಲಿ ಈಗಾಗಲೇ 2020ರ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಜಿ.ಪಿ.ಎಸ್. ಆಧಾರಿತ ಮೊಬೈಲ್ ಆಪ್ ಬಳಸಿ ನಡೆಸಲಾಗುತ್ತಿದೆ.
ಬೆಳೆ ಸಮೀಕ್ಷೆ ಮೂಲಕ ಸಂಗ್ರಹಿಸಿದ ಬೆಳೆ ಮಾಹಿತಿಯು ಮೇಲ್ವಿಚಾರಕರ ಮೂಲಕ ಅನುಮೋದನೆಗೊಂಡ ನಂತರ ಈ ಮಾಹಿತಿಯನ್ನು ಬೆಂಬಲ ಬೆಲೆಯಲ್ಲಿ ಕೃಷಿ ಉತ್ಪನ್ನಗಳ ಖರೀದಿಗಾಗಿ, ಬೆಳೆ ವಿಮೆ ಯೋಜನೆಗಾಗಿ, ಬೆಳೆ ನಷ್ಟ ಪರಿಹಾರ ನೀಡುವ ಸಮಯದಲ್ಲಿ ಉಪಯೋಗಿಸಲಾಗುತ್ತದೆ. ಮುಂದಿನ ದಿನಗಳಲ್ಲಿ ಈ ಮಾಹಿತಿಯನ್ನು ಪಹಣಿಯಲ್ಲಿ (ಖಖಿಅ) ಬೆಳೆ ಕಾಲಂನಲ್ಲಿ ಬೆಳೆ ನಮೂದಿಸಲು ಕೂಡ ಉಪಯೋಗಿಸಲಾಗುತ್ತದೆ. ಆದ್ದರಿಂದ ರೈತರು ತಮ್ಮ ಜಮೀನುಗಳಲ್ಲಿ ಬೆಳೆದಿರುವ ಬೆಳೆಗಳನ್ನು ಸರಿಯಾಗಿ ನಮೂದಿಸಲಾಗಿದೆಯೇ ಎಂಬುದನ್ನು ಬೆಳೆದರ್ಶಕ್ 2020 ಎಂಬ ಆಪ್‍ನ್ನು ಪ್ಲೇಸ್ಟೋರ್‍ನಲ್ಲಿ ಡೌನ್‍ಲೋಡ್ (https://play.google.com/store/apps/details?id=com.crop.offcsreportskharif)ಮಾಡಿಕೊಂಡು ನೋಡಬಹುದಾಗಿರುತ್ತದೆ. ಬೆಳೆಗಳ ಫೋಟೊ ಅಪ್‍ಲೋಡ್ ಮಾಡಿರುವುದರಲ್ಲಿ ಯಾವುದೇ ಲೋಪದೋಷಗಳು ಕಂಡುಬಂದಲ್ಲಿ ಬೆಳೆದರ್ಶಕ್2020 ಆಪ್‍ನಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿರುತ್ತದೆ.
ನಿಮ್ಮ ಜಮೀನಿನಲ್ಲಿ ಬೆಳೆ ಸಮೀಕ್ಷೆ ಪ್ರಕಾರ ದಾಖಲಾಗಿರುವ ಬೆಳೆ ವಿವರಗಳು ಮತ್ತು ವಿಸ್ತೀರ್ಣದ ಮಾಹಿತಿ ಪಡೆಯಬಹುದು. ಬೆಳೆ ಸಮೀಕ್ಷೆ ಸಮಯದಲ್ಲಿ ನಿಮ್ಮ ಜಮೀನಿನಲ್ಲಿ ತೆಗೆಯಲಾದ ಉPS ಆಧಾರಿತ ಛಾಯಾ ಚಿತ್ರಗಳನ್ನು ವೀಕ್ಷಿಸಬಹುದು.
ನಿಮ್ಮ ಜಮೀನಿನ ಬೆಳೆ ಸಮೀಕ್ಷೆ ಮಾಡಿದವರ ಹೆಸರು ಮತ್ತು ಮೊಬೈಲ್ ಸಂಖ್ಯೆಯ ವಿವರ ಪಡೆಯಬಹುದು. ನೀವು ಬೆಳೆ ಸಮೀಕ್ಷೆ ಪ್ರಕಾರ ದಾಖಲಿಸಿದ ಮಾಹಿತಿಯನ್ನು ಮೇಲ್ವಿಚಾರಣೆ ಮಾಡುವ ಅಧಿಕಾರಿಗಳು ಅಂಗೀಕರಿಸಿದ್ದಾರೋ ಇಲ್ಲವೋ ಎಂದು ಷರಾ ಕಾಲಂನಲ್ಲಿ ತಿಳಿಯಬಹುದು.
ಬೆಳೆ ಸಮೀಕ್ಷೆ ವಿವರ ತಪ್ಪಾಗಿ ದಾಖಲಾಗಿದ್ದಲ್ಲಿ ಆಕ್ಷೇಪಣೆ ಸಲ್ಲಿಸಬಹುದು. ಮೇಲ್ವಿಚಾರಣೆ ಮಾಡುವ ಸರ್ಕಾರಿ ಅಧಿಕಾರಿಗಳು ಆಕ್ಷೇಪಣೆ ಕುರಿತು ಏನು ಕ್ರಮ ಕೈಗೊಂಡಿದ್ದಾರೆ ಎಂದು ತಿಳಿಯಬಹುದು.
ಈ ರೀತಿಯಾಗಿ ದಾಖಲಾಗಿರುವ ಎಲ್ಲಾ ಆಕ್ಷೇಪಣೆಗಳನ್ನು ಸಂಬಂಧಪಟ್ಟ ಮೇಲ್ವಿಚಾರಕರಿಗೆ ತಂತ್ರಾಂಶದಲ್ಲಿ ಗುರುತಿಸಲಾಗುತ್ತದೆ. ಮೇಲ್ವಿಚಾರಕರು ಸ್ವೀಕೃತವಾಗಿರುವ ಪ್ರತಿಯೊಂದು ಆಕ್ಷೇಪಣೆಯನ್ನು ಕೂಲಂಕುಷವಾಗಿ ಪರಿಶೀಲಿಸಿ ಈಗಾಗಲೇ ಬೆಳೆ ಸಮೀಕ್ಷೆ ದತ್ತಾಂಶದಲ್ಲಿ ಲಭ್ಯವಿರುವ ಬೆಳೆ ಮಾಹಿತಿಯೊಂದಿಗೆ ಹೋಲಿಸಿ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸುವರು.
ಬೆಳೆ ಸಮೀಕ್ಷೆ ದತ್ತಾಂಶದಲ್ಲಿ ಲಭ್ಯವಿರುವ ಬೆಳೆ ಮಾಹಿತಿಯ ಆಧಾರದ ಮೇರೆಗೆ ಇತ್ಯರ್ಥಪಡಿಸಲು ಸಾಧ್ಯವಿಲ್ಲದ ಸನ್ನಿವೇಶದಲ್ಲಿ ಮೇಲ್ವಿಚಾರಕರೇ ಖುದ್ದಾಗಿ ಮಹಜರು ದಾಖಲಿಸುವ ಮೂಲಕ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸುವರು.