ಅಕ್ರಮ ಸಾಗಾಟ ವೇಳೆ ವಾಹನ ಅಪಘಾತ :18 ಕರುಗಳ ಬಲಿ

0

ಅಕ್ರಮವಾಗಿ ಕರುಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ವಾಹನ ಅಪಘಾತ ಸಂಭವಿಸಿ 18 ಕ್ಕೂ ಹೆಚ್ಚು ಕರುಗಳು ಮೃತಟ್ಟಿದ್ದು, ಜಿಲ್ಲಾಧಿಕಾರಿ ಆರ್.ಗಿರೀಶ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಕೊಳ್ಳುವಂತೆ ಸೂಚಿಸಿದ್ದಾರೆ.

ಬೇಲೂರು ತಾಲೂಕಿನ ದ್ಯಾವಪ್ಪನಹಳ್ಳಿ ಬಳಿಯಿಂದ ಗೂಡ್ಸ್ ವಾಹನದಲ್ಲಿ 41 ಕ್ಕೂ ಹೆಚ್ಚು ಕರುಗಳನ್ನ ಸಾಗಿಸಲಾಗುತ್ತಿತ್ತು. ಗೋಹತ್ಯೆ ನಿಷೇಧ ಕಾಯಿದೆ ಇರುವ ಹಿನ್ನೆಲೆ ರಾತ್ರೋರಾತ್ರಿ ಕರುಗಳಿಗೆ ಬಾಯಿ, ಕಾಲುಗಳಿಗೆ ಹಗ್ಗ ಕಟ್ಟಿ ಅಮಾನವೀಯವಾಗಿ ಸಾಗಾಟ ಮಾಡುತ್ತಿದ್ದ, ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ . 23 ಕರುಗಳು ಬದುಕುಳಿದಿದ್ದು ಅವುಗಳನ್ನು ರಕ್ಷಣೆ ಮಾಡಲಾಗಿದೆ.

ಶಾಸಕರಾದ ಕೆ.ಎಸ್ ಲಿಂಗೇಶ್ ,ಜಿಲ್ಲಾಧಿಕಾರಿ ಆರ್. ಗಿರೀಶ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಆರ್ .ಶ್ರೀನಿವಾಸ್ ಗೌಡ, ಪಶುಪಾಲನೆ ಅಧಿಕಾರಿಗಳು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಈ ವೇಳೆ ಕರುಗಳನ್ನು ಅಮಾನವೀಯವಾಗಿ ಕಸದ ರೀತಿಯಲ್ಲಿ ಸಾಗಾಟ ಮಾಡುತಿದ್ದ ಬಗ್ಗೆ ಆತಂಕ , ಅಸಮಾಧಾನ ವ್ಯಕ್ತಪಡಿಸಿದ ಶಾಸಕರು ತಪ್ಪಿತಸ್ಥರ ವಿರುದ್ದ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ ಗೌಡ ಅವರು ಮಾತನಾಡಿ ಘಟನೆ ಬಗ್ಗೆ ಪ್ರಕರಣ ದಾಖಲಿಸಲಾಗಿದ್ದು , ತನಿಖೆ ಕೈಗೊಳ್ಳಲಾಗುತ್ತಿದೆ ,ಶೀಘ್ರವೇ ತಪ್ಪಿತಸ್ಥರನ್ನು ಬಂಧಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು

ಪಶುಸಂಗೋಪನೆ ಇಲಾಖೆಯ ಉಪ ನಿರ್ದೇಶಕರಾದ ಡಾ|| ರಮೇಶ್, ಬೇಲೂರು ತಾಲ್ಲೂಕು ತಹಸೀಲ್ದಾರ್ ಹಾಗೂ ಮತ್ತಿತರ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

LEAVE A REPLY

Please enter your comment!
Please enter your name here