ಜಾವಗಲ್: ಜಲಜೀವನ್ ಮಿಷನ್ ಯೋಜನೆಯಡಿ 2024 ರ ವೇಳೆಗೆ ಹಳ್ಳಿಗಳ ಪ್ರತಿ ಮನೆಗೂ ನೀರಿನ ಸಂಪರ್ಕ ದೊರಕಿಸುವ ಸಂಕಲ್ಪ ಹೊಂದಲಾಗಿದೆ ಎಂದು ಶಾಸಕ ಕೆ.ಎಸ್.ಲಿಂಗೇಶ್ ತಿಳಿಸಿದರು.
ಸಮೀಪದ ಮಲ್ಲದೇವಿಹಳ್ಳಿ ಗ್ರಾಮದಲ್ಲಿ ಶುಕ್ರವಾರ ಜಲಜೀವನ್ ಮಿಷನ್ ಯೋಜನೆಯಡಿ 43.84ಲಕ್ಷ ವೆಚ್ಚದ ನೀರಿನ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ ಗ್ರಾಮೀಣ ಜನವಸತಿಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಸುರಕ್ಷಿತ ಕುಡಿಯವ ನೀರನ್ನು ಒದಗಿಸುವ ಮೂಲಕ ಜನರ ಜೀವನ ಮಟ್ಟವನ್ನು ಸುಧಾರಿಸಲು ಸರ್ಕಾರ ಹೆಚ್ಚಿನ ಮಹತ್ವವನ್ನು ನೀಡಿದೆ. ಪ್ರತಿ ದಿನ ಪ್ರತಿ ವ್ಯಕ್ತಿಗೆ ತಲಾ 55 ಲೀಟರ್ ಕುಡಿಯುವ ನೀರು ಒದಗಿಸಲಾಗುತ್ತಿದೆ ಎಂದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಮಲಾ ನಾಗರಾಜ್, ಮಾಜಿ ಅಧ್ಯಕ್ಷೆ ಶೋಭಾ ಬಾಬು, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜಶೇಖರ್, ಜೆಡಿಎಸ್ ಮುಖಂಡರಾದ ಪುರುಷೋತ್ತಮ್, ಕೃಷ್ಣಮೂರ್ತಿ, ಭೀಮೋಜಿರಾವ್, ದಿನೇಶ್ ಕಾಂಗ್ರೆಸ್ ಮುಖಂಡರಾದ ಕಲ್ಲಹಳ್ಳಿ ನಾಗರಾಜ್, ಹಾಗೂ ಡಿಗ್ಗೇನಹಳ್ಳಿ ಬಾಬು, ಇಂಜಿನಿಯರ್ ಉಮೇಶ್, ಗುತ್ತಿಗೆದಾರರಾದ ಕೀರ್ತಿ ಜೈನ್, ಹಾಗೂ ಶೀತಲ್ ಕನ್ಟ್ರಕ್ಷನ್ ಕಂಪನಿಯ ಅಭಿಲಾಷ್ ಮತ್ತಿತರರು ಇದ್ದರು.