ಪಕ್ಕದ ಮನೆಯಲ್ಲಿ ಬಾಡಿಗೆಯಿದ್ದ ಅವರ ಮನೆಯ ಗೃಹಪಯೋಗಿ ವಸ್ತುಗಳು ಸುಟ್ಟು ಹೋಗಿವೆ

0

ಬೇಲೂರು: ಆಕಸ್ಮಿಕ ಬೆಂಕಿ ತಗುಲಿ ಮನೆಯಲ್ಲಿದ್ದ ವಸ್ತುಗಳು ಸಂಪೂರ್ಣಸುಟ್ಟು ಹೋಗಿರುವ ಘಟನೆ ಪಟ್ಟಣದ ಕೆರೆ ಬೀದಿ ಸಮೀಪದ ಚನ್ನ ನಾಯಕನ ಗಲ್ಲಿಯಲ್ಲಿ ನಡೆದಿದೆ.
ಭಾಗ್ಯಮ್ಮ ನಾಗರಾಜು ಎಂಬುವರಿಗೆ ಸೇರಿದ ಹೆಂಚಿನ ಮನೆಗೆ ಮಂಗಳವಾರ ಮಧ್ಯಾಹ್ನ 1.30 ರ ಸಮಯದಲ್ಲಿ ಆಕಸ್ಮಿಕ ಬೆಂಕಿ ತಗುಲಿ

ಟಿವಿ, ಫ್ರಿಡ್ಜ್. ಡ್ರೆಸ್ಸಿಂಗ್ ಟೇಬಲ್, ಹಾಸಿಗೆ, ಬಟ್ಟೆ ಸೇರಿದಂತೆ ಗೃಹ ಉಪಯೋಗಿ ವಸ್ತುಗಳು ಸಂಪೂರ್ಣ ಸುಟ್ಟು ಹೋಗಿವೆ. ಘಟನೆಯಲ್ಲಿ ಪಕ್ಕದ ಮನೆಯಲ್ಲಿ ಬಾಡಿಗೆಯಿದ್ದ ರಾಜಶೇಖರ್ ರೆಡ್ಡಿ ಅವರ ಮನೆಯ ಗೃಹಪಯೋಗಿ ವಸ್ತುಗಳು ಸುಟ್ಟು ಹೋಗಿವೆ.
ಬೆಂಕಿ ಹೊತ್ತಿ ಉರಿಯುತ್ತಿರುವುದುನ್ನು ಗಮನಿಸಿದ ಪಕ್ಕಪಕ್ಕದ ನಿವಾಸಿಗಳು ಕೂಡಲೇ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿ ಅಗ್ನಿ ಶಾಮಕ ದಳದ ಸಿಬ್ಬಂದಿಯೊಂದಿಗೆ ಸ್ಥಳೀಯರು ಕೈಜೋಡಿಸಿ

ಬೆಂಕಿ ನಂದಿಸುವ ಮೂಲಕ ಹೆಚ್ಚಿನ ಅಕ್ಕಪಕ್ಕದ ಮನೆಗಳಿಗೆ ಬೆಂಕಿ ವ್ಯಾಪಿಸುವುದನ್ನು ತಪ್ಪಿಸಿದ್ದಾರೆ.
ಸ್ಥಳಕ್ಕೆ ಬೇಲೂರು ವೃತ್ತ ನಿರೀಕ್ಷಕ ರವಿಕಿರಣ್ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here