ಬೇಲೂರು ತಾಲ್ಲೂಕಿನಲ್ಲಿ ಸಂಪೂರ್ಣ ಲಾಕ್ಡೌನ್ ವ್ಯವಸ್ಥೆಗೆ ಅಗತ್ಯ ಕ್ರಮ ಪ್ರಜ್ವಲ್ ರೇವಣ್ಣ ಸಂಸದರು ಸೂಚನೆ

0

ಬೇಲೂರು ತಾಲ್ಲೂಕಿನಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕು ಹೆಚ್ಚುತ್ತಿರುವ ಕಾರಣದಿಂದ ಇಂದು ಬೇಲೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಕೋವಿಡ್ ಸೋಂಕು ತಡೆಗಟ್ಟಲು ಕೈಗೊಂಡಿರುವ ಕ್ರಮಗಳನ್ನು ಪರಿಶೀಲನೆ ನಡೆಸಿದ ಸಂಸದ ಪ್ರಜ್ವಲ್ ರೇವಣ್ಣ (ಲೋಕಸಭಾ ಸದಸ್ಯ )

ಪಟ್ಟಣದ ಶ್ರೀ ಚನ್ನಕೇಶವ ಸಭಾ ಭವನದಲ್ಲಿ ಏರ್ಪಡಿಸಿದ್ದ ಕೋವಿಡ್ 19 ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಈ ಕೆಳಕಂಡ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ

◆ ತಾಲ್ಲೂಕಿನಲ್ಲಿ ಸಂಪೂರ್ಣ ಲಾಕ್ಡೌನ್ ವ್ಯವಸ್ಥೆಗೆ ಅಗತ್ಯ ಕ್ರಮ
◆ ಗ್ರಾಮೀಣ ಭಾಗಗಳಲ್ಲಿ ಕೋವಿಡ್ ಕೇರ್ ಸೆಂಟರ್ ಗಳನ್ನು ಹೆಚ್ಚಿಸುವುದು.
◆ ಕೋವಿಡ್ ಫ್ರಂಟ್ ಲೈನ್ ವಾರಿಯರ್ಸ್ ಗಳಿಗೆ ಬೇಕಾದ ಅಗತ್ಯ ಕೋವಿಡ್ ನಿರ್ವಹಣೆಯ ಮೆಡಿಕಲ್ ಕಿಟ್ ಒದಗಿಸಿವುದು


◆ ಕೋವಿಡ್ ಪರೀಕ್ಷೆ ಹೆಚ್ಚಿಸುವುದು.
◆ ಆಸ್ಪತ್ರೆಗಳಿಗೆ ಅಗತ್ಯ ಆಕ್ಸಿಜನ್ ಮತ್ತು ಔಷಧಿಗಳ ಸಮರ್ಪಕ ಪೂರೈಕೆ
◆ ಕೋವಿಡ್ ಫ್ರಂಟ್ ಲೈನ್ ವಾರಿಯರ್ಸ್ ಗಳಿಗೆ ಆಕ್ಸಿಜನ್ ಸಹಿತ ಹಾಸಿಗೆಗಳ ಮೀಸಲಿರಿಸುವುದು.

ಹಾಗೂ ಇನ್ನಿತರ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದು ಅಗತ್ಯ ಕ್ರಮಗಳಿಗೆ ಸೂಚನೆ ನೀಡಿದರು

ಸಭೆಯಲ್ಲಿ ಬೇಲೂರು ಶಾಸಕರಾದ ಕೆ.ಎಸ್. ಲಿಂಗೇಶ್ ರವರು, ಉಪವಿಭಾಗಾಧಿಕಾರಿ ಗಿರೀಶ್ ನಂದನ್ ರವರು, ತಹಶೀಲ್ದಾರ್ ಎನ್ ವಿ ನಟೇಶ್ ರವರು, ಡಿವೈಎಸ್ಪಿ ನಾಗೇಶ್ ರವರು, ತಾಪಂ ಇಓ ರವಿಕುಮಾರ್ ರವರು ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here