ಸಮಗ್ರ ಪ್ರಶಸ್ತಿ ಪಡದ ಬೇಲೂರು BGS

0

ವಿದ್ಯೆ ಜೊತೆ ಕ್ರೀಡೆಯಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶಂಭುನಾಥ ಶ್ರೀ ಕರೆ

ಬೇಲೂರು: ವಿದ್ಯಾರ್ಥಿಗಳು ವಿದ್ಯೆ ಜೊತೆಗೆ ಕ್ರೀಡೆಯಲ್ಲಿ ಭಾಗವಹಿಸುವುದರಿಂದ
ತಮ್ಮ ಮುಂದಿನ ಭವಿಷ್ಯದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಲು ಸಹಕಾರಿಯಾಗುತ್ತದೆ ಎಂದು ಶ್ರೀ ಆದಿಚುಂಚನಗಿರಿ ಹಾಸನ ಶಾಖಾಮಠದ ಶ್ರೀ ಶಂಬುನಾಥ ಮಹಾಸ್ವಾಮೀಜಿ ತಿಳಿಸಿದರು.
ಪಟ್ಟಣದ ಬಿಜಿಎಸ್ ವಿದ್ಯಾಸಂಸ್ಥೆಯಲ್ಲಿ ತಾಲೂಕಿನಲ್ಲಿ ಇತ್ತೀಚೆಗೆ ನಡೆದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಭಾಗವಹಿಸಿ ಎಲ್ಲಾ ಕ್ರೀಡೆಗಳಲ್ಲೂ ಸಮಗ್ರ ಪ್ರಶಸ್ತಿ ಪಡೆದ ತಮ್ಮ ಕಾಲೇಜಿನ ವಿದ್ಯಾರ್ಥಿಗಳನ್ನು ಅಭಿನಂದಿಸಿ ಅವರು ಮಾತನಾಡಿದರು.
ಯುವ ಜನಾಂಗ ಕೇವಲ ಮೊಬೈಲ್‌ಗೆ ದಾಸರಾಗದೆ ವಿದ್ಯೆಗೆ ಅನುಕೂಲ ವಾಗುವಂತಹ ಸಮಗ್ರ ಮಾಹಿತಿಯನ್ನು ಪಡೆಯಬೇಕು. ಅದರ ಜೊತೆಗೆ ತಮ್ಮ ಮನಸ್ಸು ಹಾಗೂ ದೇಹದ ಸಮತೋಲನಕ್ಕಾಗಿ ಪ್ರತಿಯೊಬ್ಬರೂ ಕ್ರೀಡೆಗಳಲ್ಲಿ ಭಾಗÀವಹಿಸುವುದರಿಂದ ಭವಿಷ್ಯದ ಉತ್ತಮ ಪ್ರಜೆಯಾಗಿ ರೂಪುಗೊಳ್ಳಲು ಸಹಕಾರಿಯಾಗುತ್ತದೆ ಎಂದರು.
ನಮ್ಮ ಪೂಜ್ಯರೂ ಸಹ ನಮ್ಮ ಎಲ್ಲಾ ವಿದ್ಯಾಸಂಸ್ಥೆಗಳಲ್ಲೂ ಓದಿಗೆ ಎಷ್ಟು ಪ್ರಾಮುಖ್ಯತೆ ನೀಡಿದ್ದರೋ, ಅಷ್ಟೇ ಪ್ರಾಮುಖ್ಯತೆಯನ್ನು ಮಕ್ಕಳ ಭವಿಷ್ಯದ ಕ್ರೀಡೆಗೂ ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.
ನಮ್ಮ ವಿದ್ಯಾ ಸಂಸ್ಥೆಯಲ್ಲಿ ಕ್ರೀಡಾ ಕೋಟಾದಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಹಾಯ ಮಾಡಲಾಗುತ್ತಿದ್ದು, ಕ್ರೀಡೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ವಿದ್ಯಾರ್ಥಿ ಗಳಿಗೆ ಪ್ರೋತ್ಸಾಹ ನೀಡುತ್ತಿದೆ. ಮುಂದೆಯೂ ಸಹ ಅವರ ಓದಿನ ಜೊತೆಗೆ ಕ್ರೀಡೆಯಲ್ಲೂ ಹೆಚ್ಚಿನ ಸಾಧನೆ ಮಾಡುವುದಾದರೆ ಅವರಿಗೆ ನಮ್ಮ ಮಠವು ಸಹಾಯ ಮಾಡಲಿದೆ ಎಂದು ನುಡಿದರು.
ತಾಲೂಕಿನಲ್ಲಿ ಈಗಾಗಲೇ ಸಮಗ್ರ ಪ್ರಶಸ್ತಿ ಪಡೆಯುವ ಮೂಲಕ ನಮ್ಮ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ನಿಜಕ್ಕೂ ಉತ್ತಮ ಸಾಧನೆ ಮಾಡಿದ್ದಾರೆ. ಅದರಂತೆ ಅರಕಲಗೂಡು, ಚನ್ನರಾಯಪಟ್ಟಣ, ಅರಸೀಕೆರೆಯಲ್ಲಿಯೂ ಸಹ ಪ್ರಥಮ ಸ್ಥಾನ ಪಡೆದಿದೆ. ಮುಂದೆ ನಡೆಯುವ ಜಿಲ್ಲಾಮಟ್ಟದಲ್ಲಿ ಪ್ರಶಸ್ತಿ ಗಳಿಸುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗುವುದು ನಿಮ್ಮೆಲ್ಲರ ಗುರಿಯಾಗಲಿ ಎಂದು ಕಿವಿ ಮಾತು ಹೇಳಿದರು.
ಅದರ ಜೊತೆ ಓದಿಗೂ ಹೆಚ್ಚಿನ ಆದ್ಯತೆ ಕೊಡಿ. ಕೋವಿಡ್ ಹಿನ್ನೆಲೆ ನಿಮ್ಮ ಪಾಠ ಪ್ರವಚನಕ್ಕೆ ಕುಂಠಿತವಾದ ಕಾರಣದಿಂದ ಹೆಚ್ಚಿನ ತರಗತಿ ತೆಗೆದುಕೊಂಡು ನಿಮಗೆ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡಲು ನಮ್ಮೆಲ್ಲಾ ಶಿಕ್ಷಕರು ಕಾರ್ಯನ್ಮುಕರಾಗಿದ್ದಾರೆ. ನೀವೆಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಕ್ರೀಡೆಯಲ್ಲಿ ಭಾಗವಹಿಸಿದ 47 ವಿದ್ಯಾರ್ಥಿಗಳಲ್ಲಿ ಸಮಗ್ರ ಪ್ರಶಸ್ತಿ ಹಾಗೂ ಕ್ರೀಡಾ ಪ್ರಶಸ್ತಿಯೊಂದಿಗೆ ಬಾಲಕಿಯರ ಥ್ರೋ ಬಾಲ್ ಪ್ರಥಮ, ವಾಲಿಬಾಲ್ ಪ್ರಥಮ, ಕಬಡ್ಡಿ ಪ್ರಥಮ, ಹೈಜಂಪ್ ಪ್ರಥಮ, ರಿಲೇ ಪ್ರಥಮ, ಲಾಂಗ್ ಜಂಪ್ ಪ್ರಥಮ, ಬಾಲಕರ ವಿಭಾಗದಲ್ಲಿ ಥ್ರೋ ಬಾಲ್ ಪ್ರಥಮ, ಕಬಡ್ಡಿ ದ್ವಿತೀಯ ಹಾಗೂ ಎಲ್ಲಾ ಅಥ್ಲೆಟಿಕ್ ವಿಭಾಗದಲ್ಲಿ ಪ್ರಥಮ ಸ್ಥಾನದೊಂದಿಗೆ ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಸ್ವಾಮೀಜಿ ಅವರು ಅಭಿನಂದಿಸಿ ಆಶೀರ್ವದಿಸಿದರು.
ಪ್ರಾಂಶುಪಾಲ ಚಂದ್ರಶೇಖರ್, ದೈಹಿಕ ಶಿಕ್ಷಕ ದೇವರಾಜ್, ಉಪನ್ಯಾಸಕರಾದ ಕೀರ್ತಿ, ಚಂದ್ರಶೇಖರ್, ಮಹೇಶ್, ಇತರರು ಹಾಜರಿದ್ದರು.

LEAVE A REPLY

Please enter your comment!
Please enter your name here