ನಾಳೆ ಡಿ.8 ರಂದು ನಡೆಯುವ ಭಾರತ್ ಬಂದ್ ಗೆ ಹಾಸನ ಜಿಲ್ಲೆಯಲ್ಲಿ‌ ತಮ್ಮ ಬೆಂಬಲ ಘೋಷಿಸಿದ ಪ್ರಜ್ವಲ್ ರೇವಣ್ಣ (ಹಾಸನ ಲೋಕಸಭಾ ಸಂಸದರು)

  0

  *ಭಾರತ್ ಬಂದ್‌ಗೆ*
  *ಜೆಡಿಎಸ್ ಬೆಂಬಲ*

  ” ಕೇಂದ್ರ ಸರಕಾರದ ನೂತನ ಕೃಷಿ ಕಾಯ್ದೆ  ಹಿಂಪಡೆಯುವಂತೆ ಒತ್ತಾಯಿಸಿ ರೈತ-ಕೃಷಿ ಕಾರ್ಮಿಕರ ಸಂಘಟನೆಗಳು ಮಂಗಳವಾರ ಡಿ.8 ಕರೆ ನೀಡಿರುವ ಬಂದ್‌ಗೆ
  ಹಾಸನ ಜಿಲ್ಲಾ ಜೆಡಿಎಸ್ ಸಂಪೂರ್ಣ ಬೆಂಬಲ ಸೂಚಿಸಿದೆ.
  ಕೇಂದ್ರ ಬಿಜೆಪಿ ಸರ್ಕಾರ ಹೆಜ್ಜೆ ಹೆಜ್ಜೆಗೂ ರೈತ ಹಾಗೂ ಕಾರ್ಮಿಕ ವಿರೋಧಿ ನೀತಿ ಅನುಸರಿಸುವ ಮೂಲಕ ಸರ್ವಾಧಿಕಾರಿ ಆಡಳಿತ ನಡೆಸುತ್ತಿದೆ.ಎಂದು ಆರೋಪಿಸಿದೆ
  ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅನ್ನದಾತರು ಕಳೆದ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ಅವರ ಬೇಡಿಕೆ ಈಡೇರಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಎಂದು , ಇದರ ನಡುವೆ ಯಾವುದೇ ಚರ್ಚೆಗೆ ಅವಕಾಶ ಕೊಡದೆ ಮೇಲಿಂದ ಜನವಿರೋಧಿ ನೀತಿಗಳನ್ನು ಜಾರಿ ಮಾಡುತ್ತಿದೆ. ಎಂದು ಆರೋಪಿಸಿ , ಇದನ್ನು ಖಂಡಿಸಿ ಮಂಗಳವಾರ ಭಾರತ್ ಬಂದ್ ಗೆ ಕರೆ ನೀಡಿದ್ದು, ಇದಕ್ಕೆ ಜಿಲ್ಲಾ ಜೆಡಿಎಸ್ ಬೆಂಬಲ ವ್ಯಕ್ತಪಡಿಸಬೇಕು ಎಂದು ಪತ್ರದಲ್ಲಿ ವಿವರಿಸಿದೆ .,
  ಭಾರತ್ ಬಂದ್ ಹಿನ್ನೆಲೆಯಲ್ಲಿ ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದ್ದು, ಸ್ಥಳೀಯ ಚುನಾಯಿತ ಪ್ರತಿನಿಧಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಜಿಲ್ಲಾ ಜೆಡಿಎಸ್ ವಕ್ತಾರ ರಘು ಹೊಂಗೆರೆ ಮನವಿ ಮಾಡಿದ್ದಾರೆ.

  LEAVE A REPLY

  Please enter your comment!
  Please enter your name here