ಅಪಘಾತದಲ್ಲಿ ಗಾಯಗೊಂಡಿದ್ದ ಮಗನ ಅಂಗಾಂಗ ದಾನ ಮಾಡಿದ ಪೋಷಕರು

0

ಹಾಸನ: ಅಪಘಾತದಲ್ಲಿ ಗಾಯಗೊಂಡಿದ್ದ ಪುತ್ರನ ಅಂಗಾಂಗ ದಾನ ಮಾಡುವ ಮೂಲಕ ಮಗನ ಸಾವಿನಲ್ಲೂ ಪೋಷಕರು ಸಾರ್ಥಕತೆ ಮೆರೆದಿದ್ದಾರೆ.

ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ, ಹರಳಹಳ್ಳಿ ಗ್ರಾಮದ ಯೋಗೇಶ್, ರಾಣಿ ದಂಪತಿಯ ಏಕೈಕ ಪುತ್ರ ಕಿರಣ್ (23) ಅಪಘಾತದ ಬಳಿಕ ಮೆದುಳು ನಿಷ್ಕ್ರಿಯವಾಗಿದ್ದ ಹಿನ್ನೆಲೆ ಅಂಗಾಂಗ ದಾನ ಮಾಡಲಾಗಿದೆ.

ದಂಪತಿ ಬೆಂಗಳೂರಿನಲ್ಲಿ ವಾಸವಿದ್ದು, ಕಳೆದ 2 ದಿನಗಳ ಹಿಂದೆ ಕಿರಣ್ ನಗರದಲ್ಲಿ ನಡೆದ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ. ತಲೆಗೆ ಬಲವಾದ ಪೆಟ್ಟು ಬಿದ್ದಿದ್ದ ಹಿನ್ನೆಲೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಿರಣ್ ಮೆದುಳು ನಿಷ್ಕ್ರಿಯಗೊಂಡಿತ್ತು. ಈ ಹಿನ್ನೆಲೆಯಲ್ಲಿ ಪೋಷಕರು ಮಗನ ಅಂಗಾಂಗ ದಾನ ಮಾಡಿದ್ದಾರೆ.

ಕಿರಣ್ ಮಂಗಳವಾರ ರಾತ್ರಿ ಕೊನೆಯುಸಿರೆಳೆದಿದ್ದು, ಬುಧವಾರ ಮಧ್ಯಾಹ್ನ ತನ್ನ ಹುಟ್ಟೂರು ಹರಳಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

LEAVE A REPLY

Please enter your comment!
Please enter your name here